Breaking News

ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಲಾರಿ – ಕ್ಲೀನರ್ ಸ್ಥಳದಲ್ಲೇ ಸಾವು, ಚಾಲಕನಿಗೆ ಗಂಭೀರ ಗಾಯ

Spread the love

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು  ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾರಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಕುಣಿಗಲ್  ತಾಲೂಕಿನ ಕುರುಡಿಹಳ್ಳಿ ಬಳಿ ನಡೆದಿದೆ.

ಲಾರಿ ತುಮಕೂರಿನಿಂದ ಕುಣಿಗಲ್ ಕಡೆಗೆ ಅಕ್ಕಿ ಮೂಟೆ ತುಂಬಿಕೊಂಡು ಹೋಗುತ್ತಿತ್ತು. ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಡಿವೈಡರ್‌ಗೆ ಡಿಕ್ಕಿಯಾಗಿ ಪಕ್ಕದಲ್ಲಿದ್ದ ಹೇಮಾವತಿ ನಾಲೆಗೆ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ಅಕ್ಕಿ ಮೂಟೆಗಳು ಚೆಲ್ಲಾಪಿಲ್ಲಿಯಾಗಿವೆ.

ಘಟನೆಯಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯಲ್ಲಿ ಸಿಲುಕಿದ್ದ ಚಾಲಕನನ್ನ ಹೊರತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದು, ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಆಂಧ್ರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

Spread the loveಚಿಕ್ಕಬಳ್ಳಾಪುರ: ಬಾಡಿಗೆ ರೂಮ್‌ನಲ್ಲಿ ವಾಸವಾಗಿದ್ದ ಅಂತಿಮ ವರ್ಷದ ಇಂಜಿನಿಯರಿಂಗ್  ವಿದ್ಯಾರ್ಥಿ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ