Breaking News

ಆಟೋಗೆ ಡಿಕ್ಕಿ ಹೊಡೆದ ಕಾಲೇಜು ವಾಹನ; ಆಟೋ ಚಾಲಕ ಸ್ಥಳದಲ್ಲೇ ಸಾವು

Spread the love

ಬೀದರ್ : ಕಾಲೇಜು ವಾಹನ ಮತ್ತು ಆಟೋ ನಡುವೆ ಭೀಕರ ರಸ್ತೆ  ಅಪಘಾತವಾಗಿ ಆಟೋ ಚಾಲಕ  ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಕೊಳ್ಳಾರ ಕೆ ಗ್ರಾಮದ ಬಳಿ ನಡೆದಿದೆ.

28 ವರ್ಷದ ಆನಂದ ಸಾವನ್ನಪ್ಪಿದ ದುರ್ದೈವಿ. ಹುಮ್ನಾಬಾದ್‌ನಿಂದ ಖಾಸಗಿ ಕಾಲೇಜು ವಾಹನ ಬೀದರ್ ಕಡೆ ಬರುತ್ತಿದ್ದಾಗ ಆಟೋಗೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಕಾಲೇಜು ವಾಹನ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಸಾವನ್ನಪ್ಪಿದ ಆಟೋ ಸವಾರನನ್ನು ಬ್ರೀಮ್ಸ್ ಶವಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಈ ಕುರಿತು ನ್ಯೂಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಕೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಆಂಧ್ರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

Spread the loveಚಿಕ್ಕಬಳ್ಳಾಪುರ: ಬಾಡಿಗೆ ರೂಮ್‌ನಲ್ಲಿ ವಾಸವಾಗಿದ್ದ ಅಂತಿಮ ವರ್ಷದ ಇಂಜಿನಿಯರಿಂಗ್  ವಿದ್ಯಾರ್ಥಿ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ