ಹಾಸನ: ಹೃದಯಾಘಾತದಿಂದ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಸಾವನ್ನಪ್ಪಿರುವ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ.
ಡಾ.ವೆಂಕಟೇಶ್ (55) ಮೃತಪಟ್ಟ ಅಧಿಕಾರಿ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವರಾದ ಡಾ.ವೆಂಕಟೇಶ್ ಕಳೆದ ಐದಾರು ವರ್ಷಗಳಿಂದ ಸಕಲೇಶಪುರದಲ್ಲಿ ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬೆಂಗಳೂರಿನಲ್ಲಿ ಡಾ.ವೆಂಕಟೇಶ್ ಕುಟುಂಬ ನೆಲೆಸಿದ್ದು, ಸಕಲೇಶಪುರದಲ್ಲಿ ಒಬ್ಬರೇ ವಾಸವಿದ್ದರು. ಸೆ.10 ರಂದು ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಬೆಳಿಗ್ಗೆ ಫೋನ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಮನೆಗೆ ತೆರಳಿ ನೋಡಿದಾಗ ಮನೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ತಿಳಿದಿದೆ. ಡಾ.ವೆಂಕಟೇಶ್ ಸಾವಿಗೆ ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.
Laxmi News 24×7