Breaking News

ಐದೇ ದಿನಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಫಲಿತಾಂಶ ಪ್ರಕಟ: ಕೆಇಎ

Spread the love

ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್‌ಟೇಬಲ್  ಹುದ್ದೆಗಳಿಗೆ ಸೆ.6ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಕೇವಲ ಐದು ದಿನಗಳಲ್ಲಿಯೇ ಪ್ರಕಟಿಸಿ, ದಾಖಲೆ ಬರೆದಿದೆ.

ಈ ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಸೆ.14ರಂದು ಸಂಜೆ‌ 5.30ರೊಳಗೆ ನಿಗದಿತ ಲಿಂಕ್ https://cetonline.karnataka.gov.in/kea/ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆ ನಡೆದ ದಿನವೇ ಅಭ್ಯರ್ಥಿಗಳ OMR ಪ್ರತಿಗಳನ್ನು ಸ್ಕ್ಯಾನ್ ಮಾಡಿ, ಪರೀಕ್ಷಾ ಕೇಂದ್ರವಾರು ವೆಬ್‌ಸೈಟ್‌ಗೆ ಅಪ್ ಲೋಡ್ ಮಾಡಲಾಗಿತ್ತು. ಸೆ.7ರಂದು ಕೀ ಉತ್ತರ ಬಿಡುಗಡೆ ಮಾಡಿ, ಸೆ.9ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಬಳಿಕ ಸೆ.10ರಂದು ಪರಿಷ್ಕೃತ ಕೀ ಉತ್ತರ ಪ್ರಕಟಿಸಿ, ಇಂದು ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ ಎಂದು ವಿವರಿಸಿದ್ದಾರೆ.


Spread the love

About Laxminews 24x7

Check Also

8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ

Spread the loveಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ