Breaking News

ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಸಿಹಿಸುದ್ದಿ – KSRTC ಯಿಂದ ಹೆಚ್ಚುವರಿ 2,400 ಬಸ್‌ಗಳ ವ್ಯವಸ್ಥೆ

Spread the love

ಬೆಂಗಳೂರು: ಗೌರಿ – ಗಣೇಶ ಹಬ್ಬದ ಹಿನ್ನೆಲೆ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.

ಹೆಚ್ಚುವರಿಯಾಗಿ 270 ರಿಸರ್ವೇಶನ್ ಬಸ್‌ಗಳನ್ನ ನಿಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ 240 ಬಿಎಂಟಿಸಿ ಬಸ್‌ಗಳನ್ನ ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ.

ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 13ರ ವರೆಗೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ. ಮೆಜೆಸ್ಟಿಕ್, ಸ್ಯಾಟಲೈಟ್‌ (ಮೈಸೂರು ರಸ್ತೆ) ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಸೇವೆಗಳನ್ನು ನಿರ್ವಹಿಸಲಾಗುತ್ತದೆ.

ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿದಂತೆ ಪ್ರಯಾಣಿಕರ ಬೇಡಿಕೆ ಹೆಚ್ಚಿರುವ ಹಲವು ಪ್ರಮುಖ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ.

ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಸ್ವಂತ ಊರುಗಳಿಗೆ ತೆರಳಲು ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ನಿಲ್ದಾಣಗಳತ್ತ ದಾಂಗುಡಿ ಇಡುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಹೆಚ್ಚುವರಿ ಬಸ್‌ಗಳನ್ನ ನಿಯೋಜನೆ ಮಾಡಲಾಗಿದೆ.

ಹಬ್ಬ ಮುಗಿದ ಬಳಿಕ ಊರುಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆ ಸೆಪ್ಟೆಂಬರ್ 14 ರಿಂದ ಬೆಂಗಳೂರಿಗೆ ವಾಪಸ್ ಬರುವ ಪ್ರಯಾಣಿಕರಿಗಾಗಿ ಕೂಡ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ

Spread the loveಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ