Breaking News

ಅಧಿಕಾರ ಅನ್ನೋದು ವಿಷವಿದ್ದಂತೆ – ಮತ್ತೆ ಸ್ವಪಕ್ಷೀಯರ ವಿರುದ್ಧವೇ ಗುಡುಗಿದ ರಾಜಣ್ಣ

Spread the love

ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಸದಾಶಿವನಗರದಲ್ಲಿರುವ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿ ಚರ್ಚೆ ನಡೆಸಿದ ಬಳಿಕ, ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ತೆರಳಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದರು.

ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, ಅಪೆಕ್ಸ್ ಬ್ಯಾಂಕ್‌ನಲ್ಲಿ ರೈತರ ನೆರವಿಗೆ ಸರ್ಕಾರದ ಸಹಕಾರ ಅತ್ಯಂತ ಮುಖ್ಯ. ಸರ್ಕಾರದ ಪರ ಇರುವವರು ಅಧಿಕಾರದಲ್ಲಿದ್ದರೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ನಾನು ಸ್ಪರ್ಧೆಯಿಂದ ಹಿಂದೆ ಸರಿದೆ. ಸ್ಪರ್ಧೆ ಮಾಡಿದ್ದರೆ ನಾನೇ ಗೆಲ್ಲುತ್ತಿದ್ದೆ. ಸಿದ್ದರಾಮಯ್ಯ ನನ್ನ ಪರವಾಗಿಯೇ ಇದ್ದರು, ಆದರೆ ಈ ವಿಚಾರದಲ್ಲಿ ಅವರ ಮಾತು ನಡೆದಿಲ್ಲ. ರಾಜ್ಯ ನಾಯಕರಿಂದಲೋ ಅಥವಾ ಎಐಸಿಸಿ ನಾಯಕರಿಂದಲೋ ಎಲ್ಲಿ ಹಿನ್ನಡೆಯಾಯಿತೋ ಗೊತ್ತಿಲ್ಲ. ಎರಡೂವರೆ ವರ್ಷಗಳ ಬಳಿಕವೂ ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಸ್ಪರ್ಧಿಯೂ ಅಲ್ಲ ಎಂದು ಸ್ಪಷ್ಟಪಡಿಸಿದರು.

ನಾಯಕರ ಭೇಟಿ ವೇಳೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಲೋಕಾಭಿರಾಮವಾಗಿ ಚರ್ಚಿಸಿದ್ದೇವೆ. ಮುಂದಿನ ಚುನಾವಣೆಯಲ್ಲಿ ವಿಧಾನಸಭೆಗೆ ಬದಲಾಗಿ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದಾಗ ನಾಯಕರು ಸಹಮತ ವ್ಯಕ್ತಪಡಿಸಿದರು. ಹಾಗೆಯೇ 35 ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಮಹಿಳೆಯರಿಗೆ ಸ್ಥಾನ ಸಿಗದ ಬಗ್ಗೆ ಸುರ್ಜೇವಾಲಾ ಹಾಗೂ ವೇಣುಗೋಪಾಲ್ ಅವರೊಂದಿಗೆ ಚರ್ಚಿಸುವಂತೆ ತಿಳಿಸಿದ್ದೇನೆ ಎಂದರು.

ಸರ್ಕಾರದ ನೂರು ದಿನಗಳ ಸಂಭ್ರಮಾಚರಣೆಗೆ ಬಿ.ಕೆ. ಹರಿಪ್ರಸಾದ್ ಅವರಿಗೆ ಆಹ್ವಾನ ನೀಡಬೇಕಿತ್ತು. ಡಿ.ಕೆ. ಶಿವಕುಮಾರ್ ಅಧ್ಯಕ್ಷರಾಗಿದ್ದರೆ ಬಿಡುತ್ತಿದ್ದರಾ? ಸಿದ್ದರಾಮಯ್ಯ ಅವರೇ ಕರೆದು ಮಾತನಾಡಬೇಕಿತ್ತು. ಇಲ್ಲಿನ ಬೆಳವಣಿಗೆಗಳನ್ನು ಎಐಸಿಸಿಗೆ ತಿಳಿಸಬೇಕಾಗುತ್ತದೆ, ಕಾಲಕ್ರಮೇಣ ಎಲ್ಲವೂ ಸರಿಹೋಗಲಿದೆ ಎಂದು ಹೇಳಿದರು.

ಅಧಿಕಾರ ಅನ್ನೋದು ವಿಷವಿದ್ದಂತೆ, ಗಿಡದ ಸುತ್ತ ಕಳೆ ಬೆಳೆದಂತೆ. ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದನ್ನು ನಾನು ಸಂಪೂರ್ಣವಾಗಿ ನಂಬುತ್ತೇನೆ. ಮುಡಾ (MUDA) ವಿಚಾರದಲ್ಲಿ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ ಅಲ್ಲವೇ? ಕೃಷ್ಣ ಎಂಬಾತ ಸುಪ್ರೀಂ ಕೋರ್ಟ್‌ವರೆಗೆ ತಾನಾಗಿಯೇ ಹೋದನೇ? ನಮ್ಮವರೇ ಪ್ರಬಲರ ಬೆಂಬಲವಿಲ್ಲದೆ ಹೋಗಲು ಸಾಧ್ಯವೇ? ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಪರೋಕ್ಷವಾಗಿ ಗುಡುಗಿದರು.

Spread the love

About Laxminews 24x7

Check Also

2 ವರ್ಷದಿಂದ ಆ ಹುಡುಗ ಜೈಲಲ್ಲಿದ್ದಾನೆ, KPSC, ನೈಸ್‌ ವಿಷಯ ಬಂದಾಗ ಮೊಬೈಲ್‌ ಸಿಕ್ಕಿದ್ದು ಹೇಗೆ? – ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Spread the loveಹಾಸನ: ಎರಡು ವರ್ಷದಿಂದ ಆ ಹುಡುಗ (ಪ್ರಜ್ವಲ್‌ ರೇವಣ್ಣ) ಜೈಲಲ್ಲಿದ್ದಾನೆ. ಬಿಡದಿ, ಕೆಪಿಎಸ್‌ಸಿ , ನೈಸ್ ವಿಷಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ