Breaking News

ಸೋಂಕಿತ ಗರ್ಭಿಣಿ ಕರೆದೊಯ್ಯಲು ಬಂದ ಕೊರೊನಾ ವಾರಿಯರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ

Spread the love

ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.

ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಬಂದಿದ್ದ ಆಯಂಬುಲೆನ್ಸ್ ತಡೆದು ಕೊರೊನಾ ವಾರಿಯರ್ಸ್​ನ ಸೋಂಕಿತೆಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಬೆಳಗಾವಿಗೆ ಸೋಂಕಿತೆಯನ್ನ ಕರೆದುಕೊಂಡು ಹೋಗದಂತೆ ವಿರೋಧಿಸಿ ಆಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಅರ್ಧ ದಾರಿಗೆ ಆಯಂಬುಲೆನ್ಸ್ ವಾಪಾಸ್ ಕರೆತಂದು ನಿಪ್ಪಾಣಿ ಆಸ್ಪತ್ರೆಯಲ್ಲೆ ಹೆರಿಗೆ ಮಾಡಿಸುವಂತೆ ಒತ್ತಾಯ ಮಾಡಿದ್ದಾರೆ. ಸಿಬ್ಬಂದಿಗೆ ಹೆದರಿಸಿ ನಿಪ್ಪಾಣಿ ಆಸ್ಪತ್ರೆಗೆ ಸೋಂಕಿತೆಯನ್ನ ದಾಖಲು‌ ಮಾಡಿಸಿ ಪುಂಡಾಡ ಮೆರೆದಿದ್ದಾರೆ.ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದರ್ಥ: ಶಿವಲಿಂಗೇಗೌಡ ಸ್ಪಷ್ಟನೆ

Spread the loveಹಾಸನ: ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದು ಅರ್ಥ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ