Breaking News

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು

Spread the love

ಲಾಡ್ಜ್‌ನಲ್ಲಿ  ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆ ಸಕಲೇಶಪುರ  ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ.

ವರ್ಷ (23) ಮೃತ ಯುವತಿ. ಬೆಂಗಳೂರಿನ ನಾಗಸಂದ್ರದ ನಿವಾಸಿ ವರ್ಷ ಶುಕ್ರವಾರ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಟ್ರಿಪ್‌ಗೆಂದು ಬಂದಿದ್ದಳು. ಈ ಮೂವರು ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವೆಡೆ ಸುತ್ತಾಡಿದ್ದರು. ಅಲ್ಲದೇ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ನಲ್ಲಿ ಒಂದೇ ರೂಂನಲ್ಲಿ ಮೂವರು ತಂಗಿದ್ದರು.

ಮಂಗಳವಾರ ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಮೃತಪಟ್ಟಿದ್ದಾಳೆ. ಕೂಡಲೇ ರಘು ಹಾಗೂ ದರ್ಶನ್ ವರ್ಷಳನ್ನು ಸಕಲೇಶಪುರ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ ಮೃತಪಟ್ಟ ಕುರಿತು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಸಿನಿಮಾ ನಟರ ವಿರುದ್ಧ ಯುಟಿ ಖಾದರ್ ಅಸಮಾಧಾನ

Spread the loveಬೆಂಗಳೂರು: ಸಿನಿಮಾಗಳಲ್ಲಿ ನಟರು ಸಿಗರೇಟ್  ಹಿಡಿದು ಪೋಸ್ ಕೊಡುವುದನ್ನು ನೋಡಿ ಯುವಜನತೆ ಪ್ರೇರಣೆಗೊಂಡು ದಾರಿ ತಪ್ಪಬಾರದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ