Breaking News

ತುಮಕೂರಿನಲ್ಲಿ ಹಿಟ್ & ರನ್ – ನವದಂಪತಿ ಸಾವು

Spread the love

ತುಮಕೂರು: ಹಿಟ್ & ರನ್‌ಗೆ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ  ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ.

ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದಂಪತಿ ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಮಂಗಳವಾರ ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಿನಿಮಾ ನಟರ ವಿರುದ್ಧ ಯುಟಿ ಖಾದರ್ ಅಸಮಾಧಾನ

Spread the loveಬೆಂಗಳೂರು: ಸಿನಿಮಾಗಳಲ್ಲಿ ನಟರು ಸಿಗರೇಟ್  ಹಿಡಿದು ಪೋಸ್ ಕೊಡುವುದನ್ನು ನೋಡಿ ಯುವಜನತೆ ಪ್ರೇರಣೆಗೊಂಡು ದಾರಿ ತಪ್ಪಬಾರದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ