Breaking News

ಜಮ್ಮು-ಕಾಶ್ಮೀರದಲ್ಲಿ ಬಿಎಸ್‌ಎಫ್ ವಾಹನ ಪಲ್ಟಿ; ಐವರು ಸೈನಿಕರಿಗೆ ಗಾಯ

Spread the love

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಶನಿವಾರ ಗಡಿ ಭದ್ರತಾ ಪಡೆಯ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಐವರು ಗಾಯಗೊಂಡಿದ್ದಾರೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಎಸ್‌ಐ ಘರ್ ಸಿಂಗ್, ಕಾನ್‌ಸ್ಟೆಬಲ್‌ಗಳಾದ ಸುನಿಲ್ ಕುಮಾರ್, ಪಾರ್ಶುತಮ್ ಕುಮಾರ್, ಚಂದನ್ ಯಾದವ್‌ ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಎಸ್‌ಎಫ್ ಬೆಂಗಾವಲಿನ ವಾಹನ ಜಮ್ಮು ಕಡೆಗೆ ತೆರಳುತ್ತಿತ್ತು. ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ನಿವಾಸಿಯಾಗಿರುವ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ