ಬೆಂಗಳೂರು: ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಅಂಗಡಿಯ ಗೋಡೆಗೆ ರಾಯಲ್ ಎನ್ಫೀಲ್ಡ್ ಬೈಕ್ ಗುದ್ದಿದ ಪರಿಣಾಮ ಇಬ್ಬರು ಎಂಜಿನಿಯರ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ವಚನ್ ಮತ್ತು ಪ್ರದೀಪ್ ಮೃತ ವಿದ್ಯಾರ್ಥಿಗಳು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಬೆಳಗಿನ ಜಾವ ಸುತ್ತಾಡಲು ಇಬ್ಬರು ಬಂದಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
Laxmi News 24×7