ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಜಿಲ್ಲೆಯ ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಮೃತ ಯುವಕನನ್ನ ರಾಕೇಶ್ (20) ಎಂದು ಗುರುತಿಸಲಾಗಿದೆ. ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್, ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ. ಭಾನುವಾರ ಸಂಜೆ ಆರಂಭಗೊAಡಿದ್ದ ಗಣೇಶ ವಿಸರ್ಜನಾ ಮೆರವಣಿಗೆ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ದೇವರಹಳ್ಳಿ ಕೆರೆ ಬಳಿ ತಲುಪಿತ್ತು. ಈ ಗಣೇಶ ವಿಸರ್ಜನೆ ವೇಳೆ ಆಯತಪ್ಪಿ ರಾಕೇಶ್ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದ. ತಕ್ಷಣವೇ ಶೋಧ ಕಾರ್ಯ ಆರಂಭಿಸಿದ್ದ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಅಗ್ನಿಶಾಮಕ ದಳ ಮತ್ತು ಸ್ಥಳೀಯರು ರಾತ್ರಿಯಿಡೀ ಶೋಧ ಕಾರ್ಯ ನಡೆಸಿದ್ದರು. ಕೆರೆಯಲ್ಲಿ ಗಿಡ-ಗಂಟಿ ಮತ್ತು ಹುಲ್ಲು ಹೆಚ್ಚಾಗಿದ್ದರಿಂದ ಶೋಧ ಕಾರ್ಯಕ್ಕೆ ತೀವ್ರ ಅಡ್ಡಿಯಾಗಿತ್ತು. ನಿರಂತರ ಶೋಧದ ಬಳಿಕ ಇಂದು ಬೆಳಗ್ಗೆ ರಾಕೇಶ್ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬAಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7