Breaking News

ಸಿದ್ದರಾಮಯ್ಯ ಮೂರ್ತಿ ತೆರವು; ಧಾರವಾಡದಲ್ಲಿ ಪ್ರತಿಭಟನಾಕಾರರ ಆಕ್ರೋಶ

Spread the love

ಧಾರವಾಡ: ಕಲಬುರಗಿಯ ಕೋರ್ಟ್  ವೃತ್ತದ ಬಳಿ ಪ್ರತಿಷ್ಠಾಪಿಸಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೂರ್ತಿ ತೆರವುಗೊಳಿಸಿದ್ದನ್ನು ವಿರೋಧಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಿದ್ದರಾಮಯ್ಯ ಅವರು ಅಹಿಂದ ಹಾಗೂ ಹಾಲುಮತದ ನಾಯಕರು. ಸಿದ್ದರಾಮಯ್ಯ ಅವರ ಶಕ್ತಿ ಏನೆಂಬುದು ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ಹೈಕಮಾಂಡ್‌ಗೆ ಗೊತ್ತಿದೆ. ಜನನಾಯಕರಾಗಿರುವ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಅಭಿಮಾನದಿಂದ ಕಲಬುರಗಿಯ ಕೋರ್ಟ್ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿತ್ತು ಎಂದು ಪ್ರತಿಭಟನಾಕಾರರು ಹೇಳಿದರು. ಆದರೆ, ಪಾಲಿಕೆಯ ವಾಹನದಲ್ಲಿ ಮೂರ್ತಿಯನ್ನು ತೆರವು ಮಾಡಿ ತೆಗೆದುಕೊಂಡು ಹೋಗಿರುವುದು ಹಾಲುಮತಕ್ಕೆ ಮಾಡಿದ ಅನ್ಯಾಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಅದೇ ಜಾಗದಲ್ಲಿ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಮರಳಿ ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.


Spread the love

About Laxminews 24x7

Check Also

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

Spread the loveಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ