Breaking News

ಕೊಡಗಿನಲ್ಲಿ ಮಳೆ ಕೊರತೆ – ಕಾವೇರಿ ತೀರ್ಥೋದ್ಭವಕ್ಕೂ ಮುನ್ನ ಭಕ್ತರಲ್ಲಿ ಆತಂಕಕೊಡಗಿನಲ್ಲಿ ಮಳೆ ಕೊರತೆ – ಕಾವೇರಿ ತೀರ್ಥೋದ್ಭವಕ್ಕೂ ಮುನ್ನ ಭಕ್ತರಲ್ಲಿ ಆತಂಕ

Spread the love

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಈ ಬಾರಿ ಮಳೆಯ  ಪ್ರಮಾಣ ಗಣನೀಯವಾಗಿ ಕುಸಿದಿದೆ. ಇದರ ಪರಿಣಾಮ ಜಿಲ್ಲೆಯ ಜಲಮೂಲಗಳ ಮೇಲೂ ಆಗಿದ್ದು, ಸಾಮಾನ್ಯವಾಗಿ ಮಳೆಗಾಲದಲ್ಲಿ ನೀರಿನಿಂದ ತುಂಬಿ ಹರಿಯುತ್ತಿದ್ದ ಭಾಗಮಂಡಲದ  ಪವಿತ್ರ ತ್ರಿವೇಣಿ ಸಂಗಮದಲ್ಲೇ  ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ.

ಸೆಪ್ಟೆಂಬರ್ ತಿಂಗಳಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನು ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಸಾವಿರಾರು ಭಕ್ತರು ಭಾಗಮಂಡಲಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಸ್ನಾನ ಹಾಗೂ ಪಿಂಡಪ್ರದಾನಕ್ಕೆ ನೀರು ಲಭ್ಯವಾಗುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ.

ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ಸಂಗಮ ಸ್ಥಳವಾದ ಭಾಗಮಂಡಲದಲ್ಲಿ ಸಾಮಾನ್ಯವಾಗಿ ಮಳೆಗಾಲದಲ್ಲಿ ನೀರಿನಿಂದ ತುಂಬಿ ಹರಿಯಬೇಕಿತ್ತು. ಆದರೆ ತ್ರಿವೇಣಿ ಸಂಗಮದಲ್ಲಿ ಇದೀಗ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ.

ಇಷ್ಟು ವರ್ಷ ಸಂಕ್ರಮಣದವರೆಗೂ ಸಣ್ಣ ಪ್ರಮಾಣದಲ್ಲಾದರೂ ಮಳೆ ಮುಂದುವರಿಯುತ್ತಿತ್ತು. ಹೀಗಾಗಿ ತ್ರಿವೇಣಿ ಸಂಗಮದಲ್ಲೂ ನೀರಿನ ಹರಿವು ಕಾಣಿಸುತ್ತಿತ್ತು. ಆದರೆ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲೇ ಪರಿಸ್ಥಿತಿ ಬದಲಾಗಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಕುಸಿದಿರುವುದು ಇದೀಗ ಸ್ಥಳೀಯರು ಹಾಗೂ ಯಾತ್ರಾರ್ಥಿಗಳ ಗಮನ ಸೆಳೆದಿದೆ.

ಅದರಲ್ಲೂ ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಕ್ಟೋಬರ್ 17ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಭಾಗಮಂಡಲಕ್ಕೆ ಆಗಮಿಸುವ ನಿರೀಕ್ಷೆಯಿದೆ. ಸ್ನಾನ, ಪಿಂಡಪ್ರದಾನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ಲಭ್ಯವಾಗುತ್ತದೆಯೇ ಎಂಬ ಆತಂಕ ಇದೀಗ ಎದುರಾಗಿದೆ.

ಯಾತ್ರಾರ್ಥಿಗಳ ಅನುಕೂಲ ಹಾಗೂ ಸುರಕ್ಷತೆಯ ದೃಷ್ಟಿಯಿಂದ ತ್ರಿವೇಣಿ ಸಂಗಮದ ಮುಂಭಾಗದಲ್ಲಿರುವ ಚೆಕ್‌ಡ್ಯಾಂನ ಗೇಟ್‌ನ್ನು ಬಂದ್ ಮಾಡಲಾಗಿದೆ. ನೀರಿನ ಹರಿವಿಗೆ ತಡೆ ನೀಡಿರುವುದರಿಂದ ಈ ಭಾಗದಲ್ಲಿ ನೀರು ಸಂಗ್ರಹವಾಗುತ್ತಿದೆ. ಸದ್ಯ ಚೆಕ್‌ಡ್ಯಾಂ ಬಳಿ ಸಂಗ್ರಹವಾಗಿರುವ ನೀರು ಮೊಣಕಾಲು ಮಟ್ಟದಷ್ಟಿದೆ ಎನ್ನಲಾಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೇಗಿರಲಿದೆ ಎಂಬುದರ ಮೇಲೆ ತ್ರಿವೇಣಿ ಸಂಗಮದ ನೀರಿನ ಮಟ್ಟವೂ ಅವಲಂಬಿತವಾಗಿದೆ.


Spread the love

About Laxminews 24x7

Check Also

ಬಿಡದಿ ರೈತರ ಮೇಲೆ ದೌರ್ಜನ್ಯ – ಹಿರಣ್ಯಾಕ್ಷನ ಪಾಪದ ಕೊಡ ತುಂಬುತ್ತಿದೆ: ಹೆಚ್‌ಡಿಕೆ ಕಿಡಿ

Spread the loveಬೆಂಗಳೂರು: ಬಿಡದಿಯ  ಬೈರಮಂಗಲದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ರೈತರ ಮೇಲೆ ಅಮಾನುಷವಾಗಿ ದಬ್ಬಾಳಿಕೆ ನಡೆಸಿದ ಪೊಲೀಸರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ