Breaking News

ಸಾಮೂಹಿಕ ರಾಜೀನಾಮೆಗೆ ʻ108ʼ ಸಿಬ್ಬಂದಿ ನಿರ್ಧಾರ – ಇಂದಿನಿಂದಲೇ ರಾಜ್ಯದಲ್ಲಿ ಸೃಷ್ಟಿಯಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

Spread the love

ಬೆಂಗಳೂರು: ನಗರ ಸೇರಿ ರಾಜ್ಯದಲ್ಲಿ ಹೆಲ್ತ್ ಎಮೆರ್ಜೆನ್ಸಿ ಸೃಷ್ಠಿಯಾಗುತ್ತಾ ಅನ್ನೋ ಆತಂಕ ಶುರುವಾಗಿದೆ. ಇಂದು ಜಿವಿಕೆ ಸಂಸ್ಥೆ ಜೊತೆ 108 ನೌಕರರ  ಮಹತ್ವದ ಸಭೆ ನಡೆಯಲಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 15 ದಿನಗಳ ಗಡುವು ನೀಡಿದ್ದ ನೌಕರರು, ಇಂದಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಬೇಡಿಕೆ ಈಡೇರದೇ ಇದ್ರೆ ಇಂದು ರಾತ್ರಿಯಿಂದಲೇ 108 ಅಂಬುಲೆನ್ಸ್‌ ಸೇವೆ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಸಾಮೂಹಿಕ ರಾಜೀನಾಮೆ ನೀಡಿ ಹೋರಾಟ ತೀವ್ರಗೊಳಿಸಲು ಸಿದ್ಧತೆ ನಡೆದಿದೆ.

ರಾಜ್ಯಾದ್ಯಂತ 108 ಸೇವೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬೇಡಿಕೆ ಈಡೇರಿಸುವಂತೆ ಒತ್ತಾಯ ಮಾಡಲಾಗಿದೆ. ಹಾಗಾದ್ರೆ 108 ಅಂಬುಲೆನ್ಸ್‌ ನೌಕರರ ಬೇಡಿಕೆಗಳು ಏನು ಅಂತ ನೋಡೋದಾದ್ರೆ..

ʻ108ʼ ನೌಕರರ ಪ್ರಮುಖ ಬೇಡಿಕೆಗಳು ಏನು ?
> ಪ್ರತಿ ವರ್ಷ ವಾರ್ಷಿಕ ವೇತನ ಹೆಚ್ಚಳದೊಂದಿಗೆ ವೇತನ ಪರಿಷ್ಕರಣೆ
> ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವಾಹನಗಳ ವ್ಯವಸ್ಥೆ
> ವಲಯವಾರು ವೇತನ ನಿಗದಿ ವ್ಯವಸ್ಥೆ ರದ್ದುಪಡಿಸಿ ಏಕರೂಪ ವೇತನ ಜಾರಿ
> ಜೇಷ್ಠತೆ ಆಧಾರದ ಮೇಲೆ ಸಿಬ್ಬಂದಿಗೆ ವೇತನ ನಿಗದಿ
> ಕಾರ್ಮಿಕ ಇಲಾಖೆ ನಿಯಮದಂತೆ ಪ್ರತಿ ತಿಂಗಳ 7 ರ ಒಳಗೆ ವೇತನ ಪಾವತಿ
> ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 50 ಲಕ್ಷ ಪರಿಹಾರ
> ಸಿಬ್ಬಂದಿಗೆ ಸೂಕ್ತ ವಿಶ್ರಾಂತಿ ಕೊಠಡಿಗಳ ವ್ಯವಸ್ಥೆ
> ಶಿಫ್ಟ್ ಸಮಯ ಬದಲಾವಣೆ ಮಾಡುವಂತೆ ಆಗ್ರಹ


Spread the love

About Laxminews 24x7

Check Also

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

Spread the loveಮಂಡ್ಯ: ಲೇಡಿ ಪಿಎಸ್‌ಐಗೆ  ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ  ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ