Breaking News

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್‌ – ಬೀದರ್‌ನಲ್ಲಿ 3 ಕಡೆ ಲೋಕಾಯುಕ್ತ ದಾಳಿ

Spread the love

ಬೀದರ್: ಬೆಳಂಬೆಳ್ಳಗ್ಗೆ ಲೋಕಾಯುಕ್ತ ಪೊಲೀಸರ ತಂಡ ಏಕಕಾಲಕ್ಕೆ ಮೂರು ಕಡೆ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕೃಷಿ ಇಲಾಖೆಯ  ಆಡಳಿತಾಧಿಕಾರಿಯಾಗಿದ್ದ ಮಾಣೀಕ್ ಶೆರಿಕಾರ್ ಎಂಬ ನಿವೃತ್ತ ಅಧಿಕಾರಿಗೆ‌ ಲೋಕಾ ಶಾಕ್ ನೀಡಿದೆ.

ಬೀದರ್‌ ನಗರದ ಹಕ್ಕ್ ಕಾಲೋನಿ ನಿವಾಸ, ಹುಮ್ನಾಬಾದ್‌ನ ನಿವಾಸ ಮತ್ತು ಚಿಟಗುಪ್ಪ ತಾಲೂಕಿನ ಮುತ್ತಂಗಿಯ ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿದೆ.

ಸದ್ಯ ಮೂರು ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ತೀವ್ರ ತಪಾಸಣೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳಿಗಾಗಿ ಹುಡುಕಾಟ ನಡೆಸಿದೆ.


Spread the love

About Laxminews 24x7

Check Also

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

Spread the loveಮಂಡ್ಯ: ಲೇಡಿ ಪಿಎಸ್‌ಐಗೆ  ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ  ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ