Breaking News

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ – ರಜೆ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಸಾವು

Spread the love

ರಾಮನಗರ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ, ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ನಡೆದಿದೆ.

ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ (45) ಮೃತಪಟ್ಟ ಯೋಧ. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಪಡೆಯ ಯೋಧರಾಗಿದ್ದ ಚನ್ನವೀರೇಗೌಡ, ಮೊನ್ನೆಯಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು.

ತಡರಾತ್ರಿ ಯೋಧ ತಮ್ಮ ಮಗನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಗಡಸಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಚನ್ನವೀರೇಗೌಡಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಯೋಧನಿಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿರೋದಾಗಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕನಕಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

Spread the loveಮಂಡ್ಯ: ಲೇಡಿ ಪಿಎಸ್‌ಐಗೆ  ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ  ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ