Breaking News

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

Spread the love

ಮಂಡ್ಯ: ಲೇಡಿ ಪಿಎಸ್‌ಐಗೆ  ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ  ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗರ್ಭಗುಡಿಗೆ ಬಿಡುವ ವಿಚಾರದಲ್ಲಿ ಕಿರಿಕ್ ಮಾಡಿದ್ದರು. ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಸವಿತಾ ಬಳಿ ಐಶ್ವರ್ಯ ವಾಗ್ವಾದ ನಡೆಸಿದ್ದರು. ಈ ವೇಳೆ ಐಶ್ವರ್ಯ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ಷಮೆ ಕೋರಲು ಕೋರ್ಟ್ ತಾಕೀತು ಹಿನ್ನೆಲೆ ಐಶ್ವರ್ಯಗೌಡ ಬಹಿರಂಗ ಕ್ಷಮೆಕೋರಿದ್ದಾರೆ.

ಆಗಸ್ಟ್ 12ರಂದು ಭೀಮನ ಅಮಾವಾಸ್ಯೆಯಂದು ನಾನು ಮತ್ತು ನನ್ನ ಇಬ್ಬರು ಮಕ್ಕಳು ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆವು. ಅಂದು ದೇಗುಲದಲ್ಲಿ ಹೆಚ್ಚು ಜನಸಂದಣಿ ಇದ್ದಿದ್ದರಿಂದ ಹಾಗೂ ನನ್ನ ಮಕ್ಕಳಿಗೆ `ಅಮ್ಮ’ ಆಗಿದ್ದ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್‌ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು. ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ ಎಂದು ವೀಡಿಯೋ ಮೂಲಕ ಐಶ್ವರ್ಯ ಕ್ಷಮೆಯಾಚಿಸಿದ್ದಾರೆ.


Spread the love

About Laxminews 24x7

Check Also

ಬೆಲೆ ಏರಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಕೆಆರ್‌ಎಸ್ ಕಾರ್ಯಕರ್ತರ ಪ್ರತಿಭಟನೆ

Spread the loveಬಾಗಲಕೋಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ