Breaking News

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ

Spread the love

ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಸೆ.23ರಂದು ಉತ್ತರ ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಸೆ.23 ಮತ್ತು 24ರಂದು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಸೆ.24ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆ.22 ಮತ್ತು 25ರಂದು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಸೆ.24ರವರೆಗೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಸೆ.26ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು, ಮಿಂಚು ಸಹಿತ ಮಳೆ ಹಾಗೂ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಇಂದು ಬೆಂಗಳೂರು ನಗರದಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ನಡುವೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


Spread the love

About Laxminews 24x7

Check Also

ಬೆಲೆ ಏರಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಕೆಆರ್‌ಎಸ್ ಕಾರ್ಯಕರ್ತರ ಪ್ರತಿಭಟನೆ

Spread the loveಬಾಗಲಕೋಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ