Breaking News

ಬಿಜೆಪಿ ನಾಯಕರನ್ನ ರಣಹದ್ದು ಎಂದ ಸಚಿವ ಯತೀಂದ್ರ ವಿರುದ್ಧ ದೂರು

Spread the love

ರಾಮನಗರ: ಬಿಜೆಪಿಯವರನ್ನು  ರಣಹದ್ದುಗಳಿಗೆ  ಹೋಲಿಸಿ ಹೇಳಿಕೆ ನೀಡಿದ್ದ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ಸಲ್ಲಿಕೆಯಾಗಿದೆ.

ಟಿ.ನರಸೀಪುರದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡುವ ಭರದಲ್ಲಿ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ರಣಹದ್ದುಗಳು ಎಂದಿದ್ದರು. ಈ ಹೇಳಿಕೆ ಈಗ ಹೊಸ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಕುಮಾರಸ್ವಾಮಿ ಎಂಬವರು ಈ ಬಗ್ಗೆ ದೂರು ಸಲ್ಲಿಸಿದ್ದು, ಸಚಿವರು ರಾಜಕೀಯ ಟೀಕೆ ಮಾಡುವ ಭರದಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದು ಪಕ್ಷಿ ಬಗ್ಗೆ ತಪ್ಪು ಮಾಹಿತಿ ಮತ್ತು ಸಂದೇಶ ಹರಡಿದ್ದಾರೆ. ರಣಹದ್ದುಗಳು ಕ್ರೂರಿಗಳು ಹಾಗೂ ಗಲಭೆ ಸೃಷ್ಟಿಸುವ ಪಕ್ಷಿಗಳು ಎಂಬಂತೆ ಬಿಂಬಿಸುವ ಮೂಲಕ ವನ್ಯಪ್ರೇಮಿಗಳು ಮತ್ತು ಪರಿಸರಾಸಕ್ತರ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ನಿಯಮಗಳನ್ನು ಯತೀಂದ್ರ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಅಳಿವಿನಂಚಿನಲ್ಲಿರುವ ಪಕ್ಷಿ ಬಗ್ಗೆ ತಪ್ಪು ಸಂದೇಶ ರವಾನಿಸಿದ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ – ರಜೆ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಸಾವು

Spread the loveರಾಮನಗರ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ, ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ