Breaking News

ರಸ್ತೆ ದಾಟುವಾಗ ಕಾರು ಡಿಕ್ಕಿ – ನೇಮಕಾತಿ ಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿ ಸಾವು

Spread the love

ಮೈಸೂರು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮೈಸೂರು  ಜಿಲ್ಲೆಯ ನಂಜನಗೂಡಿನ  ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.

19 ವರ್ಷದ ಪ್ರಿತೇಶ್ ಜೈನ್ ಮೃತ ವಿದ್ಯಾರ್ಥಿ. ಕೋರ್ಸ್ ಪೂರ್ಣಗೊಳಿಸಿ ಉದ್ಯೋಗಕ್ಕೂ ಆಯ್ಕೆಯಾಗಿದ್ದ. ನೇಮಕಾತಿ ಪ್ರಮಾಣಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.

ಕಾಲೇಜು ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಅಪಘಾತದ ಭೀಕರ ದೃಶ್ಯ ಹಿಂಬದಿಯಲ್ಲಿ ಬರುತ್ತಿದ್ದ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರು ಬೆಂಗಳೂರು ನೋಂದಣಿಯ ಕಾರನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ನಾಲೆಯಲ್ಲಿ ನವವಿವಾಹಿತೆ ಕಣ್ಮರೆ – ಪತಿ ವಿರುದ್ಧ ಕೊಲೆ ಆರೋಪ

Spread the loveಹಾಸನ: ನಾಲೆಯಲ್ಲಿ ನವವಿವಾಹಿತೆ ಕಣ್ಮರೆಯಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿನಡೆದಿದೆ. ಜಯಶೀಲಾ.ಬಿ.ಕೆ (ಪ್ರಿಯಾಂಕ 24) ಅನುಮಾನಾಸ್ಪದವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ