Breaking News

ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು

Spread the love

ದಾವಣಗೆರೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಲ್ಲಿಗೆಹಳ್ಳಿ ಗ್ರಾಮದ ಗುಣವತಿ (36) ಮೃತ ದುರ್ದೈವಿ. ಒಂದು ದಿನದ ಹಿಂದೆಯಷ್ಟೇ ಗುಣವತಿ ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಆಕೆಯ ಆರೋಗ್ಯದಲ್ಲಿ ಏರುಪೇರಾಗಿತ್ತು.

ತಕ್ಷಣವೇ ಆಕೆಯನ್ನ ಶಿವಮೊಗ್ಗದ ಮೆಗ್ಗನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸುವ ವೇಳೆಗೆ ಬಾಣಂತಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

Spread the loveವಿಜಯಪುರ: ಬರಗಾಲ ಪೀಡಿತ ಪಟ್ಟಿಯಿಂದ  ವಿಜಯಪುರ  ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆ ಇಂಡಿ  ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ