Breaking News

ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ – ಎಎಸ್‌ಐ ಅಮಾನತು

Spread the love

ಚಿಕ್ಕಮಗಳೂರು: ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ  ಮಾಡಿದ್ದ ಎಎಸ್‌ಐ  ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ವೀರೇಂದ್ರ ಅವರನ್ನು ಸಸ್ಪೆಂಡ್ ಮಾಡಿ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಆದೇಶ ಹೊರಡಿಸಿದ್ದಾರೆ. ಎಎಸ್‌ಐ ವೀರೇಂದ್ರ ಬಾರ್‌ನಲ್ಲಿ ಪಾರ್ಟಿ ಆಯೋಜನೆ ಮಾಡಿ ಇಡೀ ರಾತ್ರಿ ಜೋರಾಗಿ ಹಾಡು ಹಾಕಿದ್ದರು. ಈ ಹಿನ್ನೆಲೆ ಗ್ರಾಮಸ್ಥರು ಬಾರ್ ಮುಂದೆ ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಬಾರ್ ಬಂದ್ ಮಾಡುವಂತೆ ಮಹಿಳೆಯರು ಸೇರಿದಂತೆ ನೂರಾರು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು.

ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ಒಂದು ವಾರದ ಹಿಂದೆ ಘಟನೆ ನಡೆದಿತ್ತು. ನಿರಂತರವಾಗಿ ದೂರು ಕೇಳಿ ಬಂದ ಹಿನ್ನೆಲೆ ಅಮಾನತು ಮಾಡಿ ಆದೇಶಿಸಲಾಗಿದೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ