Breaking News

ಸಿಎಂಗೆ ಶಾಸನದ ಗಂಧಗಾಳಿ ಗೊತ್ತಿಲ್ಲ – KPSC ಮುಚ್ಚುವೆ ಎಂದ ಮುಖ್ಯಮಂತ್ರಿಗೆ ಹೆಚ್‌ಡಿಕೆ ತರಾಟೆ

Spread the love

ನವದೆಹಲಿ: ಕೆಪಿಎಸ್‌ಸಿಯನ್ನು ಮುಚ್ಚಲು ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗೆ ಶಾಸನದ ಮಹತ್ವವೇ ಗೊತ್ತಿಲ್ಲದಂತಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಲೋಕಸೇವಾ ಆಯೋಗವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ. ಇವರ ವರಸೆ ಹೇಗಿದೆ ಎಂದರೆ `ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’, `ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ’ ಎಂದು ಲೇವಡಿ ಮಾಡಿದ್ದಾರೆ.

ಕೆಪಿಎಸ್‌ಸಿ ಸಂಸ್ಥೆ ಚೆನ್ನಾಗಿಯೇ ಇದೆ, ಕೆಟ್ಟ ಜನ ಬಂದು ಕೂತಿದ್ದಾರಷ್ಟೇ. ಬೇಲಿಯೇ ಹೊಲ ಮೇಯುತ್ತಿದೆ. ಅಲ್ಲಿಗೆ ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ವಿಧಾನಸೌಧದ 3ನೇ ಮಹಡಿಯಲ್ಲಿ ಕೂತವರೇ ಎಸಗಿದ ಪಾಪವಲ್ಲವೇ ಇದು? ಆ ಲೆಕ್ಕಕ್ಕೆ ಬಂದರೆ ವಿಧಾನಸೌಧವನ್ನೇ ಮುಚ್ಚಬೇಕು. ನಿಮ್ಮ ಸಾರಥ್ಯದಲ್ಲಿ ಅದೂ ನಡೆದುಹೋಗಲಿ ಎಂದು ಟಾಂಗ್ ನೀಡಿದ್ದಾರೆ.

ಬೇಜವಾಬ್ದಾರಿಯಿಂದ ಚಪಲಕ್ಕೆ ನಾಲಿಗೆ ಜಾರುವ ಮೊದಲು ಕೆಪಿಎಸ್‌ಸಿ ಎಂದರೆ ಏನು? ಅದರ ಸಂರಚನೆ, ಸ್ವರೂಪ ಹೇಗಿರುತ್ತದೆ? ಸಾಂವಿಧಾನಿಕವಾಗಿ ಅದಕ್ಕಿರುವ ರಕ್ಷಣೆ ಏನು? ಆ ಸಂಸ್ಥೆ ನಡೆದುಬಂದ ಹಾದಿ, ಹೆಗ್ಗಳಿಕೆ ಬಗ್ಗೆ ತಿಳಿದುಕೊಳ್ಳಿ. ಹೊಲಕ್ಕೆ ಕಳೆ ಬಿದ್ದರೆ ಅದನ್ನು ಕಿತ್ತೆಸೆಯಬೇಕು, ಹೊಲಕ್ಕೇ ವಿಷವುಣಿಸುವ ಕೆಲಸ ಆಗಬಾರದು ಎಂದು ಕಿವಿಮಾತು ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆ

Spread the loveಬೆಂಗಳೂರು: ತೀವ್ರ ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ಅನ್ನದಾತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸುಮಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ