Breaking News

ನೀರು ಸಂರಕ್ಷಿಸಿ, ಭವಿಷ್ಯ ಬೆಳಗಿಸಿ: ಕಟಗೇರಿ

Spread the love

ಬಾಗಲಕೋಟ : ನೀರನ್ನು ಉಳಿಸುವುದೆಂದರೆ ಭವಿಷ್ಯದ ರಕ್ಷಣೆ ಮಾಡಿಕೊಂಡಂತೆ ಆದ್ದರಿಂದ ಎನ್ಎಸ್ಎಸ್ ಸ್ವಯಂ ಸೇವಕರು ಸಮಾಜ ಸೇವೆಯ ಜೊತೆಗೆ ಜಲ ಸಂರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಬಸವೇಶ್ವರ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಮ್. ಹೆಚ್. ಕಟಗೇರಿ ಹೇಳಿದರು

ನಗರದ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ಕಲಾ ಮಹಾವಿದ್ಯಾಲಯದಲ್ಲಿ ಎನ್ ಎಸ್ ಎಸ್ 1ಮತ್ತು 2 ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನಾಚರಣೆ ಹಾಗೂ ಜಲ ಸಂರಕ್ಷಣೆಯಲ್ಲಿ ಯುವಕರ ಪಾತ್ರ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಪರಿಸರ ಕಾಳಜಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಯುವಜನರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ನಾವು ಏನೇ ಮಾಡಿದರು ನನಗಾಗಿ ಅಲ್ಲ ನಮಗಾಗಿ ಎಂಬ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಚಾರ್ಯರಾದ ಎಸ್. ಆರ್. ಮೂಗನೂರಮಠ ಮಾತನಾಡಿ ನೀರು ಜೀವಜಲ, ಅದನ್ನು ಉಳಿಸಿದರೆ ಮುಂದಿನ ಜೀವನ ಸರಾಗವಾಗುತ್ತದೆ. ಕಲುಷಿತವಾದ ಜಲವನ್ನು ವ್ಯರ್ಥಮಾಡದೆ ಗಿಡಮರಗಳನ್ನು ಬೆಳೆಸಲು ಪುನರ್ ಬಳಕೆ ಮಾಡಬೇಕು. ಓಡುವ ನೀರನ್ನು ನಿಲ್ಲಿಸಿ, ನಿಂತ ನೀರನ್ನು ಇಂಗಿಸಿ ಎಂದರು.

ಕಾರ್ಯಕ್ರಮದಲ್ಲಿ ಎನ್ಎಸ್ಎಸ್ 1ರ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾ. ಆರ್. ಆರ್. ಅರಶಿಣಗೋಡಿ ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ