ಬೆಂಗಳೂರು: ದರ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಇದೀಗ ಸರ್ಕಾರ ಮತ್ತೆ ಶಾಕ್ ನೀಡಿದೆ. ಹಾಲಿನ ದರ ಏರಿಕೆ ಮಾಡುವಂತೆ ಒಕ್ಕೂಟಗಳ ಪ್ರಸ್ತಾಪಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಇತ್ತೀಚಿಗಷ್ಟೇ ಹಾಲು ಒಕ್ಕೂಟಗಳ ನಿಯೋಗವು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ 8 ರೂ.ಯಿಂದ 10 ರೂ.ನಷ್ಟು ಏರಿಕೆ ಮಾಡುವಂತೆ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಸಿಎಂ 16 ಜಿಲ್ಲೆಗಳ ಹಾಲು ಸಹಕಾರ ಸಂಘಗಳ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಹಾಲಿನ ದರ ಲೀ.ಗೆ 4-5 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ.
ಸದ್ಯದಲ್ಲಿಯೇ ಸರ್ಕಾರ ಹಾಲಿನ ದರ ಏರಿಕೆ ಸಂಬಂಧ ಅಧಿಕೃತ ಆದೇಶ ಹೊರಡಿಸಲಿದೆ.
ಹಾಲಿನ ದರ ಏರಿಕೆ ಪ್ರಸ್ತಾವನೆಗೆ ಕಾರಣ:
ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಶೇ.70ರಷ್ಟು ಮಳೆ ಕೊರತೆ ಉಂಟಾಗಿದೆ. ಇದರಿಂದ ಹುಲ್ಲಿನ ಕೊರತೆಯಾಗಿದ್ದು, ಪಶು ಆಹಾರದ ಕಚ್ಚಾ ಸಾಮಗ್ರಿ, ಮೆಕ್ಕೆಜೋಳ, ಇಂಡಿ-ಬೂಸಾದ ದರ ಶೇ.25ರಷ್ಟು ಏರಿಕೆಯಾಗಿದೆ. ರಾಸುಗಳಿಗೆ ಬಳಸುವ ನೆಲಹಾಸು ದರ ಹೆಚ್ಚಳವಾಗಿದ್ದು, ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಿದೆ. ಹೀಗಾಗಿ ದರ ಏರಿಕೆ ಮಾಡಬೇಕು ಎಂದು ಒಕ್ಕೂಟ ಪ್ರಸ್ತಾವನೆ ಇಟ್ಟಿತ್ತು.
Laxmi News 24×7