Breaking News

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

Spread the love

ಹಾಸನ: ಈ ಬಾರಿಯ ಹಾಸನಾಂಬಾ ಜಾತ್ರಾ ಮಹೋತ್ಸವ  ಅ.29ರಿಂದ ನವೆಂಬರ್ 11ರವರೆಗೆ ನಡೆಯಲಿದ್ದು, ಶ್ರದ್ಧಾ, ಭಕ್ತಿ, ಸಡಗರ, ಸಂಭ್ರಮದಿಂದ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ  ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ ನಡೆಯಲಿದೆ. ಅ.29ರಂದು ಗುರುವಾರ ಮ.12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಅದು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಾರನೇ ದಿನ ಅ.3ರಿಂದ ನ.10ರವರೆಗೆ ಅಂದರೆ 12 ದಿನಗಳ ಕಾಲ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ನ.11ರಂದು ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ.

ಹಾಸನಾಂಬಾ ಜಾತ್ರಾ ಮಹೋತ್ಸವಕ್ಕಾಗಿ ಸೆ.26ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು ಪೋಸ್ಟರ್ ಬಿಡುಗಡೆ, ವೆಬ್‌ಸೈಟ್ ಲಾಂಚ್ ಮಾಡಲಿದ್ದಾರೆ. ಈ ಬಾರಿ ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಬರ ತಾಲೂಕುಗಳು ಎಂದು ಘೋಷಿಸಲಾಗಿದೆ. ಹೀಗಾಗಿ ಬರದ ಛಾಯೆಯ ನಡುವೆಯೂ ಅದ್ದೂರಿಯಾಗಿ ಅಲ್ಲದಿದ್ದರೂ ಶ್ರದ್ಧಾ, ಭಕ್ತಿ, ಸಡಗರದಿಂದ ಜಾತ್ರಾ ಮಹೋತ್ಸವ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಅನೇಕ ಸಮಿತಿಗಳನ್ನು ರಚಿಸಲಾಗಿದೆ. ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ದತೆ ನಡೆಸಿದ್ದೇವೆ. ಆಹಾರ ಮೇಳ, ಚಿತ್ರಸಂತೆ, ಸಾಂಸ್ಕೃತಿಕ, ಸಾಹಿತ್ಯ ವೈಭವವನ್ನು ಜನತೆಗೆ ತಲುಪಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆ

Spread the loveಬೆಂಗಳೂರು: ತೀವ್ರ ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ಅನ್ನದಾತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸುಮಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ