Breaking News

30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Spread the love

ತುಮಕೂರು: 30 ಸಾವಿರ ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕ ಲೋಕಾಯುಕ್ತ  ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.

ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಾಗಿ 35 ಸಾವಿರ ರೂ. ನೀಡಲಾಗಿತ್ತು. ಎರಡನೇ ಕಂತಿನ 30 ಸಾವಿರ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ಲೋಕಾಯುಕ್ತ ಎಸ್‌ಪಿ ಮಲ್ಲೇಶ್ ನೇತೃತ್ವದಲ್ಲಿ ಪಿಐಗಳಾದ ರಾಜು, ನಿರ್ಮಲಾದೇವಿ ಹಾಗೂ ಶಾಂತಿನಾಥ್ ಹೊನ್ನೂರು ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆ

Spread the loveಬೆಂಗಳೂರು: ತೀವ್ರ ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ಅನ್ನದಾತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ಸುಮಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ