Breaking News

ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಮೂವರು ದುರ್ಮರಣ

Spread the love

ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು  ಪಲ್ಟಿಯಾದ ಘಟನೆ ಕೋಲಾರ  ಜಿಲ್ಲೆ ಬಂಗಾರಪೇಟೆ ತಾಲೂಕು ಮರಗಲ್ ಸಮೀಪ ನಡೆದಿದೆ.

ಪಲ್ಟಿಯಾದ ಹಿನ್ನೆಲೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಮೃತರು ಪುಣೆ ಮೂಲದ ಪ್ರಯಾಣಿಕರು ಎಂದು ತಿಳಿದು ಬಂದಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ.

ಗಾಯಾಳುಗಳನ್ನು ಬಂಗಾರಪೇಟೆ ಹಾಗೂ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ