Breaking News

1 ಲಕ್ಷ ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಗ್ನಿಶಾಮಕ ಅಧಿಕಾರಿ

Spread the love

ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಎನ್‌ಒಸಿ ನೀಡಲು ‍1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ  ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ ಟೌನ್‌ನಲ್ಲಿರುವ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ಅಶೋಕ್ ಕುಮಾರ್ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಅನೂಪ್‌ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ರೂಪಿಸಿದ್ದರು. ಇಂದು (ಸೆ.24) ದೂರುದಾರರಿಂದ ಅಶೋಕ್ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿ ಹಣದ ಸಮೇತ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್‌ಪೆಕ್ಟರ್‌ ವೀರಬಸಪ್ಪ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ, ಭಾನುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ