ರಾಯಚೂರು: ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಪರಿಣಾಮ ಮಂತ್ರಾಲಯದಲ್ಲಿ ನದಿ ತೀರಕ್ಕೆ ತೆರಳದಂತೆ ಮಠದ ಆಡಳಿತ ಮಂಡಳಿ ಭಕ್ತರಿಗೆ ಸೂಚನೆ ನೀಡಲಾಗಿದೆ.
ತುಂಗಭದ್ರಾ ಜಲಾಶಯದಿಂದ ನದಿಗೆ 2,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಜೊತೆಗೆ ಮಳೆ ಬರುತ್ತಿರುವುದರಿಂದ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಮಂತ್ರಾಲಯದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಭದ್ರತೆಗಾಗಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಮಠದ ಆಡಳಿತ ಮಂಡಳಿ ಹಾಗೂ ಮಂತ್ರಾಲಯ ಪೊಲೀಸರಿಂದ ನದಿ ತೀರದಲ್ಲಿ ಪರಿಶೀಲನೆ ನಡೆಸಲಾಗಿದ್ದು, ನದಿ ತೀರಕ್ಕೆ ತೆರಳದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇನ್ನೂ ಧ್ವನಿವರ್ಧಕ ಮೂಲಕ ನಿರಂತರ ಎಚ್ಚರಿಕೆ ಸಂದೇಶ ನೀಡಲಾಗುತ್ತಿದ್ದು, ನೀರಿನ ಹರಿವು ಹೆಚ್ಚಿರುವ ಬಗ್ಗೆ ಭಕ್ತರು, ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ನದಿ ತೀರದಲ್ಲಿ ಪೊಲೀಸರು ಹಾಗೂ ಶ್ರೀಮಠದ ಸಿಬ್ಬಂದಿಯಿಂದ ನಿಗಾ ವಹಿಸಲಾಗಿದೆ.
Laxmi News 24×7