Breaking News

2013ರಲ್ಲಿ 6 ಗಂಟೆಗಳ ಕಾಲ ರೈಲು ತಡೆದ ಪ್ರಕರಣ – ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅರೆಸ್ಟ್‌

Spread the love

ಹುಬ್ಬಳ್ಳಿ: 2013ರಲ್ಲಿ ರೈಲು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್  ಅವರನ್ನು ಹುಬ್ಬಳ್ಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

ಶಿರಸಿಯ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಅವರು ಆಗಮಿಸಿದ್ದರು. ಈ ವೇಳೆ ಶಿರಸಿ ಪೊಲೀಸರ ಸಹಾಯ ಪಡೆದು ಅವರನ್ನು ಬಂಧಿಸಲಾಗಿದೆ. 2013ರಲ್ಲಿ ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಹೋರಾಟದ ವೇಳೆ ಅವರ ನೇತೃತ್ವದಲ್ಲಿ ರೈಲು ತಡೆಯಲಾಗಿತ್ತು. ಸುಮಾರು ಆರು ಗಂಟೆಗಳ ಕಾಲ ಎಲ್ಲಾ ರೈಲುಗಳನ್ನು ತಡೆದು ರೈತರು ಹೋರಾಟ ಮಾಡಿದ್ದರು.

ಈ ಬಗ್ಗೆ ಚಂದ್ರಶೇಖರ್‌ ಅವರ ಮೇಲೆ ರೈಲ್ವೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಹೊರಡಿಸಿದ್ದ ವಾರೆಂಟ್ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ. ಇಂದು (ಸೆ.28) ಹುಬ್ಬಳ್ಳಿ ಜೆಎಂಎಫ್‌ಸಿ ಕೋರ್ಟ್‌ಗೆ ಅವರನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.


Spread the love

About Laxminews 24x7

Check Also

ಬಿಳಿಗಿರಿರಂಗನ ಬೆಟ್ಟದ ಕಾಡಲ್ಲಿ ಗಾಂಜಾ ಬೆಳೆದ ಕಿಡಿಗೇಡಿಗಳು – 292 ಗಿಡಗಳು ಪತ್ತೆ!

Spread the loveಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದ  ಅರಣ್ಯ ಭಾಗದಲ್ಲಿ ಕಿಡಿಗೇಡಿಗಳು ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ. ಸುಮಾರು 292 ಗಾಂಜಾ ಗಿಡಗಳು  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ