Breaking News

ಕ್ಷುಲ್ಲಕ ಕಾರಣಕ್ಕೆ ಗ್ಯಾಂಗ್‌ನಿಂದ ಅಟ್ಯಾಕ್‌ – ರೌಡಿಶೀಟರ್‌ ಬರ್ಬರ ಹತ್ಯೆ

Spread the love

ಬೆಂಗಳೂರು: ಪೀಣ್ಯದ  ಗುಲ್ಬರ್ಗ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ರೌಡಿಶೀಟರ್‌ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ.

ದೀಪಕ್ ಅಲಿಯಾಸ್‌ ದೀಪು ಕೊಲೆಯಾದ ರೌಡಿಶೀಟರ್. ಈತ ನಂದಿನಿ ಲೇಔಟ್ ರೌಡಿಶೀಟರ್ ಆಗಿದ್ದ. ಕಳೆದ ಎರಡು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿತ್ತು. ಇದೇ ಕಾರಣಕ್ಕೆ ಸೆ.27ರ ರಾತ್ರಿ ದೀಪಕ್ ಮೇಲೆ ದಾಳಿ ಮಾಡಿದ 7-8 ಜನರ ಗ್ಯಾಂಗ್‌ ದಾಳಿ ಮಾಡಿ ಹತ್ಯೆ ಮಾಡಿದೆ.

ಎರಡು ದಿನದ ಹಿಂದೆ ದೀಪು, ಈಶ್ವರ್ ನೇಪಾಳಿ, ಸುಮನ್ ಅಲಿಯಾಸ್ ಪಾರಿವಾಳ ಎಂಬವರು ಗಲಾಟೆ ಮಾಡಿದ್ದರು. ಇದೇ ಕಾರಣಕ್ಕೆ ಅಟ್ಯಾಕ್‌ ಮಾಡಿದ ದುಷ್ಕರ್ಮಿಗಳು, ಚಾಕುವಿನಿಂದ ದೀಪುಗೆ ಇರಿದಿದ್ದರು. ತೀವ್ರ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ.

ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಈ ಸಂಬಂಧ ಪೀಣ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಿಳಿಗಿರಿರಂಗನ ಬೆಟ್ಟದ ಕಾಡಲ್ಲಿ ಗಾಂಜಾ ಬೆಳೆದ ಕಿಡಿಗೇಡಿಗಳು – 292 ಗಿಡಗಳು ಪತ್ತೆ!

Spread the loveಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದ  ಅರಣ್ಯ ಭಾಗದಲ್ಲಿ ಕಿಡಿಗೇಡಿಗಳು ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ. ಸುಮಾರು 292 ಗಾಂಜಾ ಗಿಡಗಳು  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ