Breaking News

16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆ

Spread the love

ಭೋಪಾಲ್: ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಬರೋಬ್ಬರಿ 16 ಲಕ್ಷ ಫಾಲೋವರ್ಸ್ ಹೊಂದಿದ್ದ ಫೇಮಸ್ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ (30) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ನಿಧಿ ಅವರಿಗೆ ಫೇಸ್‌ಬುಕ್‌ನಲ್ಲಿ ಸುಮಾರು 9 ಲಕ್ಷ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 7 ಲಕ್ಷ ಫಾಲೋವರ್ಸ್ ಇದ್ದರು. ಅವರ ರೀಲ್ಸ್ ಮತ್ತು ಪೋಸ್ಟ್‌ಗಳಿಗೆ ಸಾವಿರಾರು ಪ್ರತಿಕ್ರಿಯೆಗಳು ಬರುತ್ತಿದ್ದವು. ಹಲವು ವಿಡಿಯೋಗಳು ಲಕ್ಷಾಂತರ ವೀವ್ಸ್ ಪಡೆದುಕೊಂಡಿದ್ದವು.

ಸಿಂಗ್ರೌಲಿಯ ಭೂಸಾ ಮೋಡ್ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನಿಧಿ ಮೃತಪಟ್ಟಿದ್ದಾರೆ. ಶನಿವಾರ ಸಂಜೆ ಅವರು ಯಾರೊಂದಿಗೋ ಫೋನ್‌ನಲ್ಲಿ ಮಾತನಾಡುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಳಿಕ ಅವರ ಮನೆಯ ಕೋಣೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ನಿಧಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯರಾಗಿದ್ದರು. ರೀಲ್ಸ್ ಹಾಗೂ ಡಿಜಿಟಲ್ ಕಂಟೆಂಟ್ ಮೂಲಕ ದೊಡ್ಡ ಮಟ್ಟದ ಫಾಲೋವರ್ಸ್‌ಗಳನ್ನು ಹೊಂದಿದ್ದರು. ಸ್ಥಳೀಯ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು.

2024ರಲ್ಲಿ ನಿಧಿ ‘ಮಿಸ್ ಪ್ರಿಟಿ ಇಂಡಿಯಾ’ ಪ್ರಶಸ್ತಿ ಗೆದ್ದಿದ್ದರು. ಬಳಿಕ ಮಾಡೆಲಿಂಗ್ ಮತ್ತು ಆ್ಯಕ್ಟಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದರು. ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ ನೀಡಬೇಕು ಎಂಬ ಆಸೆಯೂ ಹೊಂದಿದ್ದರು ಎಂದು ವರದಿಯಾಗಿದೆ.

ನಿಧಿ ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರ ಕೊನೆಯ ಫೋನ್ ಕಾಲ್, ಡಿಜಿಟಲ್ ಚಟುವಟಿಕೆಗಳು ಹಾಗೂ ಸಾವಿಗೂ ಮುನ್ನ ನಡೆದ ಘಟನೆಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆ ಪೂರ್ಣಗೊಂಡ ಬಳಿಕವಷ್ಟೇ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಮಹಿಳಾ ಮೀಸಲಾತಿ ಸನ್ನಿಹಿತ – ತುಮಕೂರಿನಲ್ಲಿ ಪುತ್ರಿಯರನ್ನು ರಾಜಕೀಯ ಅಖಾಡಕ್ಕೆ ಅಣಿಗೊಳಿಸುತ್ತಿರುವ ನಾಯಕರು

Spread the loveತುಮಕೂರು: ಕೇಂದ್ರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ಮಸೂದೆ ಕಾನೂನಾಗುವ ಎಲ್ಲಾ ಲಕ್ಷಣ ಇದೆ ಎಂಬ ಸುಳಿವು ಸಿಕ್ಕಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ