Breaking News

ಮೈಸೂರು ದಸರಾ – ಯತೀಂದ್ರ ಅಬ್ಬರಕ್ಕೆ ಡಿಕೆಶಿ ಬ್ರೇಕ್‌!

Spread the love

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆರಂಭದ ಹೊಸ್ತಿಲಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಂತೆ ಕಾಣುತ್ತಿದೆ.

ಈ ಬಾರಿಯ ದಸರಾ ಆಚರಣೆಗೆ ಸರ್ಕಾರ ಕೈಗೊಂಡಿರುವ ದಿಢೀರ್ ನಿರ್ಧಾರವೊಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರ ಪ್ರಾಬಲ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ತಂತ್ರ ರೂಪಿಸಿ ಬ್ರೇಕ್ ಹಾಕಿದ್ದಾರಾ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿದೆ.

ಮೈಸೂರು ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬರೋಬ್ಬರಿ 22 ಸಚಿವರನ್ನು ದಸರಾ ಉತ್ಸವದ ಉಸ್ತುವಾರಿಗೆ ನಿಯೋಜಿಸಲಾಗಿದೆ. ಹತ್ತು ದಿನಗಳ ಕಾಲ ನಡೆಯುವ ನಾಡಹಬ್ಬದ ಒಂದೊಂದು ದಿನದ ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ತಲಾ ಇಬ್ಬಿಬ್ಬರು ಸಚಿವರನ್ನು ನೇಮಿಸಿ ಆದೇಶಿಸಲಾಗಿದೆ.

ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೇ ಇಡೀ ದಸರಾದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳುತ್ತಿದ್ದರು. ಉದ್ಘಾಟನೆಯಿಂದ ಹಿಡಿದು ಜಂಬೂಸವಾರಿಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರದ್ದೇ ಸಂಪೂರ್ಣ ಹವಾ ಇರುತ್ತಿತ್ತು. ಆದರೆ ಈ ಬಾರಿ ಒಟ್ಟಾರೆ 22 ಸಚಿವರನ್ನು ಕಣಕ್ಕಿಳಿಸಿರುವುದು ಜಿಲ್ಲಾ ಉಸ್ತುವಾರಿಯ ಏಕಮೇವ ಅಬ್ಬರ ಮತ್ತು ಪಾರುಪತ್ಯಕ್ಕೆ ಕತ್ತರಿ ಹಾಕುವ ವ್ಯವಸ್ಥಿತ ರಾಜಕೀಯ ನಡೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೈಸೂರು ಭಾಗದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅತಿಯಾದ ಹಸ್ತಕ್ಷೇಪ ಮತ್ತು ಪ್ರಭಾವವನ್ನು ತಗ್ಗಿಸಲು, ಅವರನ್ನು ದಸರಾ ಮುನ್ನೆಲೆಯಿಂದ ಸೈಡಿಗೆ ಸರಿಸುವ ಉದ್ದೇಶದಿಂದಲೇ ಇಂತಹ ಯೋಜನೆಯನ್ನು ಜಾರಿಗೆ ತರಲಾಗಿದೆಯೇ ಎಂಬ ಚರ್ಚೆ ಪಕ್ಷದ ಆಂತರಿಕ ವಲಯದಲ್ಲಿ ಆರಂಭವಾಗಿದೆ.

ಈ ಎಲ್ಲಾ ರಾಜಕೀಯ ಊಹಾಪೋಹಗಳಿಗೆ ತೆರೆ ಎಳೆಯಲು ಯತ್ನಿಸಿರುವ ಡಾ. ಯತೀಂದ್ರ ಸಿದ್ದರಾಮಯ್ಯ, “ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ ಅಥವಾ ರಾಜಕೀಯ ತಂತ್ರವಾಗಲಿ ಇಲ್ಲ. ಇದು ಮುಖ್ಯಮಂತ್ರಿಗಳ ಹೊಸ ಪರಿಕಲ್ಪನೆ. ನಾಡಹಬ್ಬ ದಸರಾವನ್ನು ಇನ್ನಷ್ಟು ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ಹಾಗೂ ಎಲ್ಲಾ ಭಾಗಗಳ ಸಚಿವರನ್ನು ಒಳಗೊಂಡು ಅತ್ಯಂತ ವಿಜೃಂಭಣೆಯಿಂದ ನಡೆಸಲು ಈ ಯೋಜನೆ ರೂಪಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ದರ್ಶನ್‌ಗೆ ಬಿಗ್ ಶಾಕ್- ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಮಾಫಿ ಸಾಕ್ಷ್ಯ ದಾಖಲು

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್  ಮತ್ತು ಇತರ ಆರೋಪಿಗಳಿಗೆ ಭಾರೀ ಕಾನೂನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ