Breaking News

ಕೇಂದ್ರದ 3 ತಂಡಗಳು ರಾಜ್ಯಕ್ಕೆ, ಬರ ಪರಿಸ್ಥಿತಿಯ ಅಧ್ಯಯನ: ಪರಮೇಶ್ವರ್

Spread the love

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂರು ತಂಡಗಳು ಕರ್ನಾಟಕಕ್ಕೆ ಆಗಮಿಸಿ ಬರ  ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಲಿವೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಒಂದು ತಂಡ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೊಂದು ತಂಡ ಹಾಗೂ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಮೈಸೂರು ಭಾಗದಲ್ಲಿ ಮೂರನೇ ತಂಡ ಅಧ್ಯಯನ ನಡೆಸಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ( ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದ ತಂಡಗಳು ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿ ತಮ್ಮ ವರದಿಯನ್ನು ಸಲ್ಲಿಸಲಿವೆ. ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ್ದು, ಅದರ ಆಧಾರದ ಮೇಲೆಯೇ ಕೇಂದ್ರದ ತಂಡಗಳು ಪರಿಶೀಲನೆ ನಡೆಸಲಿವೆ. ಇದರ ಜೊತೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮೆಮೊರಾಂಡಂ ಕೂಡ ಸಲ್ಲಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬರ ಎಂದು ಘೋಷಿಸಲಾಗಿರುವ ಎಲ್ಲ ತಾಲೂಕುಗಳ ಬಗ್ಗೆಯೂ ಕೇಂದ್ರದ ತಂಡಗಳು ಮಾಹಿತಿಯನ್ನು ಸಂಗ್ರಹಿಸುವ ಸಾಧ್ಯತೆಯಿದೆ. ಕೆಲವು ತಾಲೂಕುಗಳಿಗೆ ತಂಡಗಳು ಖುದ್ದಾಗಿ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಳ್ಳಲಿವೆ. ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ಹಾಗೂ ಕೇಂದ್ರದ ತಂಡಗಳು ಸ್ಥಳದಲ್ಲೇ ನಡೆಸುವ ಪರಿಶೀಲನೆಯಲ್ಲಿನ ವಾಸ್ತವಾಂಶಗಳ ನಡುವೆ ಯಾವುದೇ ವ್ಯತ್ಯಾಸವಿದೆಯೇ ಎಂಬುದನ್ನೂ ಅವರು ಪರಿಶೀಲಿಸಲಿದ್ದಾರೆ ಎಂದು ವಿವರಿಸಿದರು.


Spread the love

About Laxminews 24x7

Check Also

ದರ್ಶನ್‌ಗೆ ಬಿಗ್ ಶಾಕ್- ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಮಾಫಿ ಸಾಕ್ಷ್ಯ ದಾಖಲು

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್  ಮತ್ತು ಇತರ ಆರೋಪಿಗಳಿಗೆ ಭಾರೀ ಕಾನೂನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ