Breaking News

ಧಾರವಾಡದಲ್ಲಿ ವ್ಯಕ್ತಿ ಕೊಲೆ; ತಿಂಗಳ ಬಳಿಕ ಇಬ್ಬರು ಅರೆಸ್ಟ್‌

Spread the love

ಧಾರವಾಡ: ಧಾರವಾಡದ  ಐನಾಕ್ಸ್ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹನುಮಂತ ಅಣ್ಣಿಗೇರಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿ, ಐನಾಕ್ಸ್ ಸಮೀಪದ ಖಾಲಿ ಜಾಗದಲ್ಲಿ ಮೃತದೇಹವನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದರು.

ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಹನುಮಂತ ಹಾಗೂ ಯಲ್ಲಪ್ಪ ಬಂಡಿವಡ್ಡರ ನಡುವೆ ಜಗಳ ನಡೆದಿತ್ತು. ಈ ವೇಳೆ ಯಲ್ಲಪ್ಪ ಹನುಮಂತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಮೃತದೇಹವನ್ನು ಐನಾಕ್ಸ್ ಬಳಿ ಖಾಲಿ ಜಾಗದಲ್ಲಿ ಎಸೆದು ಪರಾರಿಯಾಗಿದ್ದ.

ಘಟನೆ ಬಳಿಕ ಯಲ್ಲಪ್ಪನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಕೊಲೆ ನಡೆದು ಒಂದು ತಿಂಗಳು ಕಳೆದರೂ ಆರೋಪಿಗಳ ಪತ್ತೆಯಾಗಿರಲಿಲ್ಲ.

ಆರೋಪಿ ಪತ್ತೆಗೆ ಧಾರವಾಡ ಪೊಲೀಸ್ ಆಯುಕ್ತ ಭೂಷಣ ಭೋರಸೆ ಅವರು ವಿಶೇಷ ತಂಡ ರಚಿಸಿದ್ದರು. ಇದೀಗ ಕಾರ್ಯಾಚರಣೆ ನಡೆಸಿದ ತಂಡ ಯಲ್ಲಪ್ಪ ಸೇರಿದಂತೆ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದೆ.


Spread the love

About Laxminews 24x7

Check Also

ಮುಂದಿನ ಬಾರಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ಕೊಡ್ಬೇಡಿ – ಸ್ವಪಕ್ಷೀಯರಿಂದಲೇ ಕೆಪಿಸಿಸಿ ಅಧ್ಯಕ್ಷರಿಗೆ ದೂರು

Spread the loveಚಿಕ್ಕಬಳ್ಳಾಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್‌ಗೆ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್‌ನ ಕೆಲ ಮುಖಂಡರು ಕೆಪಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ