Breaking News

ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಆತ್ಮಹತ್ಯೆಗೆ ಶರಣಾದ ಯುವಕ!

Spread the love

ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿ, ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಿಗೆರೆ  ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.

ಅಭಿಷೇಕ್ (25) ಆತ್ಮಹತ್ಯೆಗೆ ಶರಣಾದ ಯುವಕ. ಈತನಿಗೆ ಕಳೆದ ತಿಂಗಳಷ್ಟೆ ಮದುವೆ ನಿಶ್ಚಯವಾಗಿತ್ತು. ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಎರಡೂ ಮನೆಯವರು ಮದುವೆ ಸಂಭ್ರಮದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದರೆ ಕಳೆದ 4 ದಿನದ ಹಿಂದೆ ಮನೆಯಲ್ಲೇ ಯುವಕ ಮನೆಯಲ್ಲೇ ವಿಷ ಸೇವಿಸಿದ್ದ. ಆತನನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.

ಮದುವೆ ಇದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ. ಅಭಿಷೇಕ್ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಎದೆಮಟ್ಟದ ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಅತ್ತ ಹುಡುಗಿ ಮನೆಯವರು ಕೂಡ ಮಗಳ ಸ್ಥಿತಿ ನೋಡಿ ಮಮ್ಮುಲು ಮರುಗಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ