ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಿರುವ ಒಟ್ಟು ಸುಮಾರು 38,000 ಕೋಟಿ ರೂ. ಬಾಕಿ ಮೊತ್ತವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕೃತ ಮನವಿ ಪತ್ರ ಸಲ್ಲಿಸಿದೆ.
ಈ ಹಿಂದೆ ಉಪಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಹಾಗೂ ನಂತರ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯಲ್ಲಿ ನೀಡಿದ್ದ ಭರವಸೆಯನ್ನು ಸಂಘ ನೆನಪಿಸಿದೆ.
ಎರಡು ತಿಂಗಳ ಒಳಗಾಗಿ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, 2021-22 ರಿಂದ ಇಂದಿನವರೆಗೂ ಬಾಕಿ ಬಿಡುಗಡೆಯಾಗದೆ ಗುತ್ತಿಗೆದಾರರು ಮತ್ತು ಅವರನ್ನು ಅವಲಂಬಿಸಿರುವ ಸುಮಾರು 1.50 ಲಕ್ಷ ಕುಟುಂಬಗಳು ಸಂಕಷ್ಟದಲ್ಲಿವೆ ಎಂದು ಸಂಘ ತಿಳಿಸಿದೆ.
ಬೇಡಿಕೆ ಏನು?
ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಬಾಕಿ ಇರುವ ಸುಮಾರು 38,000 ಕೋಟಿ ರೂ. ಮೊತ್ತವನ್ನು ಸರ್ಕಾರ ತುರ್ತಾಗಿ ಬಿಡುಗಡೆ ಮಾಡಬೇಕು.
ಲೋಕೋಪಯೋಗಿ ಹಾಗೂ ಬಿಬಿಎಂಪಿ ಹೊರತುಪಡಿಸಿ ಉಳಿದ ಇಲಾಖೆಗಳಲ್ಲಿ ಪಾರದರ್ಶಕತೆ ಕೊರತೆಯಿದ್ದು, ಜ್ಯೇಷ್ಠತೆ ಆಧಾರದ ಮೇಲೆ ಹಣ ಬಿಡುಗಡೆ ಮಾಡಬೇಕು ಮತ್ತು ‘Special LOC’ ನೀಡುವುದನ್ನು ಸಂಪೂರ್ಣವಾಗಿ ತಡೆಹಿಡಿಯಬೇಕು.
2017-18 ಮತ್ತು 2018-19ನೇ ಸಾಲಿನ ವ್ಯಾಟ್ನಿಂದ ಜಿ.ಎಸ್.ಟಿ.ಗೆ ಬದಲಾದ ವ್ಯತ್ಯಾಸದ ಮೊತ್ತ ಶೇ. 8 ನ್ನು ತುರ್ತಾಗಿ ಬಿಡುಗಡೆ ಮಾಡಲು ಹಣಕಾಸು ಇಲಾಖೆಗೆ ಶಿಫಾರಸು ಮಾಡಬೇಕು.
ಇ-ಸಂಗ್ರಹಣಾ ವೇದಿಕೆಯ ಗುತ್ತಿಗೆ ನಿರ್ವಹಣಾ ಮಾಡ್ಯೂಲ್ನಲ್ಲಿ ಕಾಮಗಾರಿಗಳ ವಿವರ ಅಪ್ಲೋಡ್ ಮಾಡಿದ ನಂತರವೇ ಖಜಾನೆಯಿಂದ ಹಣ ಬಿಡುಗಡೆ ಮಾಡಬೇಕೆಂಬ ನಿಯಮವನ್ನು ರದ್ದುಪಡಿಸಬೇಕು.
ಕರ್ನಾಟಕ ರಾಜ್ಯದ ಗುತ್ತಿಗೆದಾರರು ಕೋವಿಡ್-19 ಸಂದರ್ಭದಿಂದ ಮತ್ತು ಸರ್ಕಾರ ಮಟ್ಟದಲ್ಲಿ ಇರುವ ಅವ್ಯವಸ್ಥೆಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಇಲ್ಲಿಯವರೆಗೂ ಟೆಂಡರ್ ಕಾಮಗಾರಿಗಳು ಸಿಗುತ್ತಿಲ್ಲ. ಆದ್ದರಿಂದ ಲೈಸೆನ್ಸ್ ನವೀಕರಿಸಲು, ಕಾಮಗಾರಿ ಮುಂದುವರೆಸಲು 10 ವರ್ಷಗಳ ವರೆಗೆ ವಿಸ್ತರಿಸುವುದು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾದ ಹಣವನ್ನು ನಿರ್ಮಿತಿ ಕೇಂದ್ರ, ಕೆ.ಆರ್.ಐ.ಡಿ.ಎಲ್. ಗೂ ಇತರೇ ಸಂಸ್ಥೆಗಳಿಗೆ ನೀಡುತ್ತಿರುವುದರ ಬಗ್ಗೆ, ಆ ಭಾಗದ ಗುತ್ತಿಗೆದಾರರು ಕೆ.ಕೆ.ಆರ್.ಡಿ.ಬಿ ನಲ್ಲಿ ಕಲ್ಯಾಣ ಪಥ ಕಾಮಗಾರಿಗಳಲ್ಲಿ ತಾಂತ್ರಿಕ ದೋಷಗಳ ವಿಚಾರವಾಗಿ ಅಧಿಕೃತ ಸಭೆ ಕರೆಯಬೇಕು.
Laxmi News 24×7