Breaking News

ಮಡಗಾಂವ್ – ಮಂಗಳೂರು ವಂದೇ ಭಾರತ್ ಬೆಂಗಳೂರುವರೆಗೆ ವಿಸ್ತರಣೆ

Spread the love

ಕಾರವಾರ: ಉತ್ತರ ಕನ್ನಡ ಮತ್ತು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು ಮತ್ತು ಮಡಗಾಂವ್  ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್ – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿಗೆ ವಿಸ್ತರಿಸಲಾಗಿದೆ.

ಈ ಕುರಿತು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ.

“ಬೆಂಗಳೂರು ಮತ್ತು ಮಡಗಾಂವ್ ನಡುವೆ ಹೊಸದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಬೇಕು ಎಂದು ಮಾರ್ಚ್‌ 11 ರಂದು ರಂದು ನಾನು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದೆ. ನಮ್ಮ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲನ್ನು ಮುರ್ಡೇಶ್ವರ, ಗೋಕರ್ಣ ಹಾಗೂ ಕಾರವಾರ ಮಾರ್ಗವಾಗಿ ರಾಜಧಾನಿ ಬೆಂಗಳೂರಿನವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಇನ್ನು ಮುಂದೆ ಈ ರೈಲು ಪರಿಷ್ಕೃತ ಸಮಯದೊಂದಿಗೆ ರೈಲು ಸಂಖ್ಯೆ 26655/26656 ಯಶವಂತಪುರ – ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿ ಸಂಚರಿಸಲಿದೆ. ಈ ನಿರ್ಧಾರದಿಂದ ಕರಾವಳಿ ಜಿಲ್ಲೆಗಳು, ಉತ್ತರ ಕನ್ನಡ ಭಾಗದ ಜನರಿಗೆ, ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತಾದಿಗಳಿಗೆ ಹಾಗೂ ಪ್ರವಾಸೋದ್ಯಮಕ್ಕೆ ಅಪಾರ ಅನುಕೂಲವಾಗಲಿದೆ. ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಮಸ್ತ ಕ್ಷೇತ್ರದ ಜನರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

Spread the love

About Laxminews 24x7

Check Also

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Spread the loveಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ