Breaking News

ಸ್ಕೂಟಿ, ಲಾರಿ ನಡುವೆ ಮುಖಾಮುಖಿ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

Spread the love

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ ವೇಯ  ಸರ್ವೀಸ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಮನಗರ  ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ನಡೆದಿದೆ.

ರಾಮನಗರ ತಾಲೂಕಿನ ದಾರಾಪುರ ಗ್ರಾಮದ ನಿವಾಸಿ ನಿತಿನ್ (21) ಮೃತಪಟ್ಟ ಸವಾರ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಹಿಂಬದಿ ಸವಾರ ಸೇವಂತ್‌ನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಯುವಕರಿಬ್ಬರೂ ಸ್ಕೂಟಿಯಲ್ಲಿ ವಾಪಸ್ ಮನೆಗೆ ತೆರಳುತ್ತಿದ್ದರು. ಈ ವೇಳೆ ಕೆಂಪನಹಳ್ಳಿ ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಎದುರಿನಿಂದ ಬಂದ ಲಾರಿಯೊಂದು ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸವಾರ ನಿತಿನ್ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Spread the loveಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ