ಚಿಕ್ಕಬಳ್ಳಾಪುರ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್ನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (18) ಮೃತ ವಿದ್ಯಾರ್ಥಿ. ಜೋಹೆಲ್ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ.
ಹಾಸ್ಟೆಲ್ನ ಕೊಠಡಿಯಲ್ಲಿರುವ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಪತ್ತೆಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಚನ್ನರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಕೆಳಗಿಳಿಸಿ, ಶವಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆಯ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಘಟನೆ ಸಂಬಂಧ ಚನ್ನರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Laxmi News 24×7