Breaking News

ರಾಜ್ಯದ ರೈತರಿಗೆ ಗುಡ್‌ನ್ಯೂಸ್‌ – ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಒಪ್ಪಿಗೆ

Spread the love

ನವದೆಹಲಿ: ಕನಿಷ್ಠ ಬೆಂಬಲ ಬೆಲೆಯಲ್ಲಿ ಕರ್ನಾಟಕದಲ್ಲಿ ಸೂರ್ಯಕಾಂತಿ, ಹೆಸರುಕಾಳುಸೋಯಾಬೀನ್ ಖರೀದಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ಪ್ರಹ್ಲಾದ್‌ ಜೋಶಿ ಈ ವಿಚಾರವನ್ನು ತಿಳಿಸಿ ಕರ್ನಾಟಕದ ರೈತ ಬಾಂಧವರ ಹಿತ ಕಾಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಪ್ರಮುಖ ಹಾಗೂ ರೈತಪರ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.

ಜೋಶಿ ಪೋಸ್ಟ್‌ನಲ್ಲಿ ಏನಿದೆ?
2026-27ರ ಮುಂಗಾರು ಋತುವಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ಪ್ರಮುಖ ಬೆಳೆಗಳನ್ನು ಖರೀದಿಸಲು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ನನ್ನ ಮನವಿ ಹಾಗೂ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ ಖರೀದಿಗೆ ಅನುಮೋದನೆ ನೀಡಿದ್ದಾರೆ. 

ಈ ಯೋಜನೆಯಡಿ ಕರ್ನಾಟಕದಿಂದ ಒಟ್ಟು 13,413 ಮೆಟ್ರಿಕ್ ಟನ್ ಸೂರ್ಯಕಾಂತಿ, 38,250 ಮೆಟ್ರಿಕ್ ಟನ್ ಹೆಸರುಕಾಳು (ಮೂಂಗ್) ಹಾಗೂ 1,15,500 ಮೆಟ್ರಿಕ್ ಟನ್ ಸೋಯಾಬೀನ್ ಅನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ರೈತರಿಂದ ಖರೀದಿಸಲಾಗುವುದು.

ರೈತರ ಶ್ರಮಕ್ಕೆ ತಕ್ಕ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ದೊರಕಿಸಿಕೊಡುವ ನಿಟ್ಟಿನಲ್ಲಿ, ಕರ್ನಾಟಕದ ಕೃಷಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರಮುಖ ಪ್ರಸ್ತಾವನೆಗೆ ತಕ್ಷಣವೇ ಸ್ಪಂದಿಸಿ ಅನುಮೋದನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬರೆದಿದ್ದಾರೆ.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ