Breaking News

ಕೆಲಸ ಬಿಡಲು ಸಿದ್ಧ, ಆದರೆ ಅವರನ್ನು ಬಿಡುವುದಿಲ್ಲ” ಎಂದ ಉಪ ಆಯುಕ್ತೆ

Spread the love

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯ ಬಳಿಕ ಅಧಿಕಾರಿ ಹಾಗೂ ಪಾಲಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಪಾಲಿಕೆ ಆವರಣದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಪಾಲಿಕೆ ಅಭಿವೃದ್ಧಿ ಶಾಖೆಯ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಕರ್ ಅವರು ಎಂಐಎಂ ಪಾಲಿಕೆ ಸದಸ್ಯ ಶಾಹಿದ್ ಖಾನ್ ಪಠಾಣ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ, ಶಾಹಿದ್ ಖಾನ್ ಅವರು ಅಧಿಕಾರಿಯ ಕಾರ್ಯವೈಖರಿ ಕುರಿತು ‘ಅನ್‌ಫಿಟ್’ ಎಂಬ ಟೀಕೆ ಮಾಡಿದ್ದರು ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡ ಉಪ ಆಯುಕ್ತೆ, ಊಟದ ವಿರಾಮದ ವೇಳೆ ಸದಸ್ಯರ ವಿರುದ್ಧ ಏರುಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

“ನಾನು ಕೆಲಸ ಬಿಡಲು ಸಿದ್ಧ, ಆದರೆ ಅವರನ್ನು ಬಿಡುವುದಿಲ್ಲ. ನನ್ನ ವಿರುದ್ಧ ಮಾತನಾಡಲು ಅವರಾರು?” ಎಂದು ಪ್ರಶ್ನಿಸಿದ ಅವರು, ಸಭೆಯಲ್ಲಿ ಮಹಿಳಾ ಅಧಿಕಾರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಇದೇ ವೇಳೆ, “ದುಡ್ಡು ಕೊಟ್ಟರೆ ಎಲ್ಲರೂ ಚಲೋ, ಆದರೆ ನಾನು ಒಂದು ಪೈಸೆಯೂ ದುಡ್ಡು ಕೊಡಲ್ಲ” ಎಂದು ಕಿಡಿಕಾರಿದ್ದಾರೆ ಎನ್ನಲಾಗಿದೆ.

ಅಧಿಕಾರಿ ಹಾಗೂ ಸದಸ್ಯರ ನಡುವೆ ವಾಗ್ವಾದ ನಡೆಯುತ್ತಿದ್ದ ವೇಳೆ ಕೆಲ ಬಿಜೆಪಿ ಸದಸ್ಯರು ಮಧ್ಯಪ್ರವೇಶಿಸಿ ಉಪ ಆಯುಕ್ತೆಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಘಟನೆಯಿಂದ ಪಾಲಿಕೆ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.


Spread the love

About Laxminews 24x7

Check Also

ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್. ಅಶೋಕ್

Spread the loveಬೆಂಗಳೂರು: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗಾಗಿ ಪ್ರತಿಪಕ್ಷ ಬಿಜೆಪಿ  ಇಟ್ಟಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿಲ್ಲ. ಬದಲಾಗಿ ರೈತರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ