ಮೈಸೂರು: ದಕ್ಷಿಣ ಭಾರತದ ಖ್ಯಾತ ನಟ, ಸೂಪರ್‌ಸ್ಟಾರ್ ರಜನಿಕಾಂತ್ ಅವರಿಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.
ಚಿತ್ರೀಕರಣ ಸಂಬಂಧ ಮೈಸೂರಿನಲ್ಲಿ ತಂಗಿರುವ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಇದೇ ವೇಳೆ ದೇವಸ್ಥಾನದ ಆಡಳಿತ ಮಂಡಳಿ ನಟ ರಜನಿಕಾಂತ್ ಅವರಿಗೆ ಹೂವಿನ ಹಾರ ಹಾಕಿ ಗೌರವಪೂರ್ವಕವಾಗಿ ಸನ್ಮಾನಿಸಿದರು.
ಇನ್ನೂ ಸೂಪರ್‌ಸ್ಟಾರ್ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಸದ್ಯ ಮೈಸೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದ ವಿವರಗಳ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.
Laxmi News 24×7