Breaking News

ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್, ಸಿಮ್‌ ಪತ್ತೆ; ಆರೋಪಿಗಳ ವಿರುದ್ಧ FIR

Spread the love

ಬೆಂಗಳೂರು: ಪರಪ್ಪನ ಅಗ್ರಹಾರ  ಕೇಂದ್ರ ಕಾರಾಗೃಹದಲ್ಲಿ ಮತ್ತೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಜೈಲಿನೊಳಗೆ ಒಂದು ಮೊಬೈಲ್ ಫೋನ್ ಹಾಗೂ ಮೂರು ಸಿಮ್‌ಕಾರ್ಡ್‌ಗಳು ಪತ್ತೆಯಾಗಿದ್ದು, ಈ ಸಂಬಂಧ ಆರೋಪಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಪ್ರವೇಶಿಸಿದವು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಮೊಬೈಲ್ ಹಾಗೂ ಸಿಮ್‌ಗಳನ್ನು ಜೈಲಿನೊಳಗೆ ಬಿಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಜೈಲಿನೊಳಗೆ ಮೊಬೈಲ್ ಬಳಸುತ್ತಿದ್ದ ಆರೋಪಿತರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಜೈಲು ಅಧಿಕಾರಿ ಕೊಟ್ರೇಶ್ ನೀಡಿದ ದೂರಿನ ಆಧಾರದ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈಲಿನೊಳಗೆ ಮೊಬೈಲ್ ಸೇರಿದಂತೆ ನಿಷೇಧಿತ ವಸ್ತುಗಳ ಬಳಕೆ ಹಾಗೂ ಅವುಗಳ ಪ್ರವೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವು

Spread the loveಶಿವಮೊಗ್ಗ: ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಬಲಿ ಪಡೆದಿದ್ದ ಕಾಡಾನೆ  ಶೌರ್ಯ (32) ಶಿವಮೊಗ್ಗದ  ಸಕ್ರೆಬೈಲು  ಆನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ