Breaking News

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ

Spread the love

ಕೊಪ್ಪಳ: ಇಲ್ಲಿನ ಗಂಗಾವತಿ ಬಸ್ ನಿಲ್ದಾಣದಲ್ಲಿ  ಹುಡುಗಿಯರ ಫೋಟೋ ಕ್ಲಿಕ್ಕಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಗೆ ಧರ್ಮದೇಟು ನೀಡಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ನಿವಾಸಿಯೊಬ್ಬ ಗಂಗಾವತಿ ಬಸ್ ನಿಲ್ದಾಣದಲ್ಲಿ ಮೊಬೈಲ್‌ನಲ್ಲಿ ಯುವತಿಯರ ಫೋಟೋ ಸೆರೆಹಿಡಿಯುತ್ತಿದ್ದ. ಈ ವೇಳೆ ಗಮನಿಸಿದ ಮಹಿಳೆಯರು ಆತನಿಗೆ ಪ್ರಶ್ನೆ ಮಾಡಿದ್ದಾರೆ. ಬಳಿಕ ಸ್ಥಳದಲ್ಲಿದ್ದ ಸಾರ್ವಜನಿಕರು ವ್ಯಕ್ತಿಗೆ ಧರ್ಮದೇಟು ನೀಡಿದ್ದಾರೆ. 

ಆನಂತರ ಆತನ ಮೊಬೈಲ್ ಪರಿಶೀಲಿಸಿದಾಗ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ಫೋಟೋಗಳು ಪತ್ತೆಯಾಗಿವೆ. ಅಲ್ಲದೆ ಆತ ಅಶ್ಲೀಲ ಚಿತ್ರಗಳನ್ನೂ ತೆಗೆದಿದ್ದಕ್ಕೆ ಸ್ಥಳೀಯರು ವ್ಯಕ್ತಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.


Spread the love

About Laxminews 24x7

Check Also

ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವು

Spread the loveಶಿವಮೊಗ್ಗ: ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಬಲಿ ಪಡೆದಿದ್ದ ಕಾಡಾನೆ  ಶೌರ್ಯ (32) ಶಿವಮೊಗ್ಗದ  ಸಕ್ರೆಬೈಲು  ಆನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ