Breaking News

KSRTC ಬಸ್, ಲಾರಿ ಮಧ್ಯೆ ಭೀಕರ ಅಪಘಾತ – ಬಸ್ ಚಾಲಕ ದುರ್ಮರಣ, ಹಲವರಿಗೆ ಗಾಯ

Spread the love

ಚಿತ್ರದುರ್ಗ: ಸರ್ಕಾರಿ ಬಸ್ಸೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಕಣಿವೆ ಬಳಿ ನಡೆದಿದೆ.

ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದೂ, ಮೃತರನ್ನು ನಾಗರಾಜ್ ನಾಯ್ಕ (52) ಎಂದು ಗುರುತಿಸಲಾಗಿದೆ. ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್, ಕಣಿವೆ ಬಳಿ ಗೊಬ್ಬರದ ಚೀಲಗಳನ್ನು ತುಂಬಿಕೊಂಡು ಹೊರಟಿದ್ದ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಬಸ್‌ನಲ್ಲಿದ್ದ ನಾಲ್ಕಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಬಡಾವಣೆ ಹಾಗೂ ಟ್ರಾಫಿಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ