Breaking News

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ; 22 ದಿನದಲ್ಲಿ 3.04 ಕೋಟಿ ರೂ. ಕಾಣಿಕೆ ಸಂಗ್ರಹ

Spread the love

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ  ಸೆಪ್ಟೆಂಬರ್ ತಿಂಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. 22 ದಿನಗಳ ಅವಧಿಯಲ್ಲಿ ಬರೋಬ್ಬರಿ 3 ಕೋಟಿ 4 ಲಕ್ಷ 37,906 ರೂ. ಕಾಣಿಕೆ ಸಂಗ್ರಹವಾಗಿದೆ.

ಪ್ರತಿ ತಿಂಗಳಿನಂತೆ ಈ ಬಾರಿಯೂ ಮಂತ್ರಾಲಯಕ್ಕೆ ಭಕ್ತರ ದಂಡು ಹರಿದು ಬಂದಿದ್ದು, ರಾಯರ ದರ್ಶನ ಪಡೆದ ಭಕ್ತರು ಹುಂಡಿಗೆ ಭಾರೀ ಪ್ರಮಾಣದಲ್ಲಿ ಕಾಣಿಕೆ ಹಾಕಿದ್ದಾರೆ.

ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2 ಕೋಟಿ 96 ಲಕ್ಷ 7,906 ರೂ. ನಗದು ರೂಪದಲ್ಲಿ ಬಂದಿದೆ. ಇನ್ನು 8 ಲಕ್ಷ 30 ಸಾವಿರ ಮೌಲ್ಯದ ನಾಣ್ಯಗಳು ಸಂಗ್ರಹವಾಗಿವೆ. ಇದರ ಜೊತೆಗೆ ಭಕ್ತರು ಕಾಣಿಕೆ ರೂಪದಲ್ಲಿ 48 ಗ್ರಾಂ ಚಿನ್ನ ಹಾಗೂ 285 ಗ್ರಾಂ ಬೆಳ್ಳಿ ಸಮರ್ಪಿಸಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು. ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಕರಸೇವಕರು ಭಾಗವಹಿಸಿದ್ದರು.

ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಶ್ರೀಮಠದ ಅಧಿಕಾರಿಗಳು ಹುಂಡಿ ಎಣಿಕೆ ವೇಳೆ ಸ್ಥಳದಲ್ಲೇ ಹಾಜರಿದ್ದು, ಸಂಪೂರ್ಣ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಿದರು.


Spread the love

About Laxminews 24x7

Check Also

ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

Spread the loveಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ  ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ