Breaking News

ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ; ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆ, ಹಲವೆಡೆ ಹಾನಿ

Spread the love

ಮಡಿಕೇರಿ: ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆ  ಇದೀಗ ಕೊಡಗು ಜಿಲ್ಲೆಯಲ್ಲಿ  ಮತ್ತೆ ಆರ್ಭಟಿಸಿದೆ. ಇಂದು ಮಧ್ಯಾಹ್ನದಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸುಂಟಿಕೊಪ್ಪ, ಮುರ್ನಾಡು ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ.

ಕೂಡಿಗೆ ಸುತ್ತಮುತ್ತ ಭಾರೀ ಮಳೆಯಾಗಿದ್ದು, ದಿಢೀರ್ ಸುರಿದ ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ರಸ್ತೆಗಳ ಮೇಲೆ ಮಳೆ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಕೆಲವೆಡೆ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಮಳೆಯ ಅಬ್ಬರಕ್ಕೆ ಕೂಡಿಗೆ ವ್ಯಾಪ್ತಿಯಲ್ಲಿ ಹಲವು ಕಡೆ ಮರಗಳು ಧರೆಗೆ ಉರುಳಿವೆ. ಮರಗಳು ಬಿದ್ದ ಪರಿಣಾಮ ಕೆಲವು ವಿದ್ಯುತ್ ಕಂಬಗಳಿಗೂ ಹಾನಿಯಾಗಿದ್ದು, ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇನ್ನು ವಿರಾಜಪೇಟೆ, ಮುರ್ನಾಡು, ಸುಂಟಿಕೊಪ್ಪ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಏಕಾಏಕಿ ಗುಡುಗು-ಸಿಡಿಲಿನೊಂದಿಗೆ ಮಳೆ ಸುರಿದಿದ್ದರಿಂದ ಜನರು ಕೆಲಕಾಲ ಆತಂಕಕ್ಕೊಳಗಾದರು.

ಮತ್ತೊಂದೆಡೆ, ಮಳೆಯ ಆಗಮನ ರೈತಾಪಿ ವರ್ಗದಲ್ಲಿ ಸಂತಸ ಮೂಡಿಸಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿದ್ದ ರೈತರಿಗೆ ಇದೀಗ ಸುರಿಯುತ್ತಿರುವ ಮಳೆ ಕೊಂಚ ನೆಮ್ಮದಿ ತಂದಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇನ್ನಷ್ಟು ಮಳೆಯಾಗುವ ನಿರೀಕ್ಷೆಯಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ